Sunday, January 19, 2025
Sunday, January 19, 2025

ಹೆರ್ಗ ಬಬ್ಬುಸ್ವಾಮಿ ಲೇಔಟ್ ನ ‘ಸರ್ವರಿಗೂ ಸೂರು ಮನೆ’ ಹಂಚಿಕೆ

ಹೆರ್ಗ ಬಬ್ಬುಸ್ವಾಮಿ ಲೇಔಟ್ ನ ‘ಸರ್ವರಿಗೂ ಸೂರು ಮನೆ’ ಹಂಚಿಕೆ

Date:

ಪರ್ಕಳ, ಮಾ. 20: ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ‘ಸರ್ವರಿಗೂ ಸೂರು ಕಾರ್ಯಕ್ರಮ’ ಅಡಿಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ 460 ಮನೆಗಳನ್ನು ಒಳಗೊಂಡ ವಸತಿ ಸಮುಚ್ಛಯ ನಿರ್ಮಿಸಲಾಗುತ್ತಿದೆ. ಇದಕ್ಕೆ ಅರ್ಜಿ ಹಾಕಿ ಆಯ್ಕೆಯಾದ ಫಲಾನುಭವಿಗಳಿಗೆ ದ್ವಿತೀಯ ಹಂತದಲ್ಲಿ 106 ಮನೆಗಳ ಹಂಚಿಕೆ ಚೀಟಿ ಎತ್ತುವ ಪ್ರಕ್ರಿಯೆ ಮೂಲಕ ಸರಳಬೆಟ್ಟು ಬಬ್ಬುಸ್ವಾಮಿ ಲೇಔಟ್ ನಲ್ಲಿ ಶಾಸಕ ಕೆ. ರಘುಪತಿ ಭಟ್ ಉಪಸ್ಥಿತಿಯಲ್ಲಿ ನಡೆಯಿತು.

ಉಡುಪಿಯ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಸಮುಚ್ಛಯದ 460 ಮನೆಗಳಲ್ಲಿ ಮೊದಲ ಹಂತದಲ್ಲಿ 240 ಮನೆಗಳನ್ನು ಚೀಟಿ ಎತ್ತುವ ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಲಾಗಿತ್ತು. ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ನೆಲೆಯಡಿ ನೆಲ ಮಹಡಿಯ ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ಸಂತೋಷ್ ಜತ್ತನ್, ಗಿರಿಧರ್ ಆಚಾರ್ಯ, ಭಾರತಿ ಪ್ರಶಾಂತ್, ರಜನಿ ಹೆಬ್ಬಾರ್, ನಗರ ಆಶ್ರಯ ಸಮಿತಿ ಸದಸ್ಯರಾದ ಮುರಳಿ ಭಟ್ ಹಾಗೂ ಪ್ರೊಫೆಷನರಿ ಐ.ಎ.ಎಸ್ ಯತೀಶ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಸನ್ನ ಕುಮಾರ್, ನಗರಸಭೆಯ ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!