Monday, January 20, 2025
Monday, January 20, 2025

ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಘಟಕ ಕೊಡುಗೆ

ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಘಟಕ ಕೊಡುಗೆ

Date:

ಕಾರ್ಕಳ, ಮಾ. 23: ತಾಲೂಕಿನ ಕಾಬೆಟ್ಟು ಸರಕಾರಿ ಪ್ರೌಢಶಾಲೆಗೆ ಕ್ಯಾನಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸುವ ಕಾರ್ಯಕ್ರಮ ವಿಶ್ವ ಜಲ ದಿನದಂದು ನಡೆಯಿತು. ಬ್ಯಾಂಕಿನ ಉಪ ಮಹಾಪ್ರಬಂಧಕರಾದ ಪ್ರಶಾಂತ್ ಜೋಶಿ ಮಾತನಾಡಿ, ಈ ಕುಡಿಯುವ ನೀರಿನ ಘಟಕವು ಬ್ಯಾಂಕಿನ ಸಿ ಎಸ್ ಆರ್ ನಿಧಿಯ ಕೊಡುಗೆ ಆಗಿದ್ದು ಸರಕಾರಿ ಶಾಲೆಯ ಮೂಲಭೂತ ಅವಶ್ಯಕತೆಯನ್ನು ಪೂರೈಕೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದರು.

ಉಡುಪಿ ಶಾಖೆಯ ಪ್ರಬಂಧಕರಾದ ರಾಮಮೋಹನ್ ಅವರು ವಿಶ್ವ ಜಲ ದಿನದ ಕೊಡುಗೆಯಾದ ಈ ಶುದ್ಧ ನೀರಿನ ಯಂತ್ರವು ಶಾಲೆಯ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಗೆ ಸಹಕಾರಿ ಆಗುತ್ತದೆ ಎಂದರು. ಪ್ರೌಢಶಾಲೆಯ ಮುಖ್ಯಶಿಕ್ಷಕಿ ಇಂದಿರಾ ಅವರು ಈ ಕೊಡುಗೆ ನೀಡಿದ್ದಕ್ಕೆ ಕ್ಯಾನಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಗೆ ಮತ್ತು ಅದಕ್ಕೆ ಸಹಕಾರ ನೀಡಿದ ಚಾರ್ಟರ್ಡ್ ಅಕೌಂಟೆಂಟ್ ನಿತ್ಯಾನಂದ ಪ್ರಭು ಅವರಿಗೆ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರಾದ ಸುಮಾ ಮಣಿ ಮತ್ತು ಅಶೋಕ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!