Saturday, September 5, 2026
Saturday, September 5, 2026

ಬಿ.ಡಿ. ಶೆಟ್ಟಿ ಕಾಲೇಜು: ಮತದಾರರ ಹಕ್ಕುಗಳು ಕುರಿತು ಮಾಹಿತಿ ಕಾರ್ಯಾಗಾರ

ಬಿ.ಡಿ. ಶೆಟ್ಟಿ ಕಾಲೇಜು: ಮತದಾರರ ಹಕ್ಕುಗಳು ಕುರಿತು ಮಾಹಿತಿ ಕಾರ್ಯಾಗಾರ

Date:

ಕೋಟ: ಡಿ. ಜಿ. ಶೆಟ್ಟಿ ಎಜುಕೇಷನಲ್ ಸೊಸೈಟಿ ಧಾರವಾಡ ಇದರ ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಮಾಬುಕಳ ಇಲ್ಲಿನ ವಿದ್ಯಾರ್ಥಿಗಳಿಗಾಗಿ ಮತದಾರರ ಹಕ್ಕುಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಮಾಹಿತಿ ನೀಡಿ ಮತದಾನದ ಹಕ್ಕುಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರ ಹಾಗೂ ಒಬ್ಬ ಸಾಮಾನ್ಯನ ಮತಕ್ಕೂ ಯಾವುದೇ ವ್ಯತ್ಯಾಸ ಇರುವುದಿಲ್ಲ.

ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು ಎಂದರು ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಅತಿಥಿ, ಜಿಲ್ಲಾ ಮತದಾರರ ಸಾಕ್ಷರತಾ ಕ್ಲಬ್ ರಾಯಭಾರಿ ವಿಘ್ನೇಶ್ ಶೆಣೈ ಇವರು ಮತದಾರರ ಪಟ್ಟಿಗೆ ಸೇರ್ಪಡೆಯಾಗದ ವಿದ್ಯಾರ್ಥಿಗಳನ್ನು ಮೊಬೈಲ್ ತಂತ್ರಜ್ಞಾನದ ಮೂಲಕ ಸೇರ್ಪಡೆಗೊಳಿಸುವ ವಿಧಾನವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾಲೇಜಿನ ಎನ್.ಎಸ್. ಎಸ್. ಘಟಕದ ಅಧಿಕಾರಿ ಹಾಗೂ ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ಸುಕುಮಾರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಮಿಳಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!