Home ಸುದ್ಧಿಗಳು ಪ್ರಾದೇಶಿಕ ಚೇರ್ಕಾಡಿ: ಕಂಟೈನರ್ ಮನೆ ಉದ್ಘಾಟನೆ

ಚೇರ್ಕಾಡಿ: ಕಂಟೈನರ್ ಮನೆ ಉದ್ಘಾಟನೆ

366
0

ಉಡುಪಿ, ಮಾ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ.ಜಾತಿ ಮತ್ತು ಪಂಗಡದ ಅಲೆಮಾರಿ ಅಭಿವೃಧ್ದಿ ನಿಗಮ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಚೇರ್ಕಾಡಿಯ ಮೈತಗುಲಿಯಲ್ಲಿ ಕಂಟೈನರ್ ಮನೆ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಬಡವರ್ಗದ ಜನತೆಗೆ ಇಂತಹ ಕಂಟೈನರ್ ಮನೆಗಳು ಅತ್ಯಂತ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಮನೆ ನಿರ್ಮಾಣದ ವೆಚ್ಚವೂ ಸಹ ಕಡಿಮೆಯಾಗಲಿದ್ದು, 6 ಲಕ್ಷ ರೂ ವೆಚ್ಚದಲ್ಲಿ ಈ ಮನೆ ನಿರ್ಮಾಣಗೊಳ್ಳಲಿದ್ದು, ಅರ್ಹ ಬಡ ಜನತೆಯನ್ನು ಗುರುತಿಸಿ, ಇಲಾಖೆ ವತಿಯಿಂದ ಇಂತಹ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದರು.

ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಆರೂರು ಗ್ರಾ.ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರಮೂರ್ತಿ, ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.