ಬೈಲೂರು, ಮಾ. 23: ಉಡುಪಿ ನಗರಸಭಾ ವ್ಯಾಪ್ತಿಯ ಬಡಗುಬೆಟ್ಟು ಬೈಲೂರು ವಾರ್ಡಿನಲ್ಲಿ ಸುಸಜ್ಜಿತವಾದ ‘ಮಹಿಷಮರ್ದಿನಿ ಉದ್ಯಾನವನ’ ನಿರ್ಮಿಸಲು ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ. 25 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮೋಹನ್ ಶೆಟ್ಟಿ, ನಗರಸಭೆಯ ಪೌರಾಯುಕ್ತರಾದ ಆರ್.ಪಿ ನಾಯ್ಕ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಬಡಗುಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಂಜಿತ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ರಾಜೇಶ್, ಬೂತ್ ಅಧ್ಯಕ್ಷರಾದ ಅರುಣ್ ಶೆಟ್ಟಿಗಾರ್, ಸುನೀಲ್ ರಾಜ್, ದುರ್ಗಾಪ್ರಸಾದ್, ಮುಂತಾದವರು ಉಪಸ್ಥಿತರಿದ್ದರು.