Home ಸುದ್ಧಿಗಳು ಪ್ರಾದೇಶಿಕ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ಗೆ ಎರಡನೇ ಬಾರಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ಗೆ ಎರಡನೇ ಬಾರಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ

251
0

ಉಡುಪಿ, ಮಾ. 26: ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಸಂಘಟನೆ ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷ ನೀಡುತ್ತಾ ಬಂದಿರುವ ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿಗೆ ಈ ಬಾರಿ ಕಾರ್ಕಳ ತಾಲೂಕಿನಲ್ಲೇ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯ ಮೂಲಕ ಗುರುತಿಸಿಕೊಂಡಿರುವ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಸಂಸ್ಥೆಗೆ ಜಿಲ್ಲಾ ಪ್ರಶಸ್ತಿ ಮತ್ತು 25 ಸಾವಿರ ರೂ. ನಗದು ಹಾಗೂ ಪ್ರಶಂಸಾ ಪತ್ರವನ್ನು ನೀಡಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಗೌರವಿಸಲಾಯಿತು. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಭಟ್, ಉಡುಪಿ ಯುವಜನ ಕ್ರೀಡಾ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಶೆಟ್ಟಿ, ಉಡುಪಿ ನೆಹರೂ ಯುವ ಕೇಂದ್ರ ಸಂಘಟನೆಯ ಜಿಲ್ಲಾ ಯುವ ಸಮಾನ್ವಯಾಧಿಕಾರಿ ವಿಲ್ಫ್ರೆಡ್ ಡಿ’ಸೋಜಾ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಪೂಜಾರಿ ಬೀರೊಟ್ಟು, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ಸತೀಶ್ ಅಬ್ಬನಡ್ಕ, ಕಾರ್ಯದರ್ಶಿ ಲಲಿತಾ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಸದಸ್ಯರಾದ ಸುರೇಶ್ ಅಬ್ಬನಡ್ಕ, ಸಂಧ್ಯಾ ಶೆಟ್ಟಿ, ಆರತಿ ಕುಮಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಸುಲೋಚನಾ ಕೋಟ್ಯಾನ್, ಅಶ್ವಿನಿ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.