Sunday, February 23, 2025
Sunday, February 23, 2025

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ

Date:

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸುವ ಸಲುವಾಗಿ, ಜನವರಿ 01, 2022 ರ ಅರ್ಹತಾ ದಿನಾಂಕಕ್ಕೆ 18 ವರ್ಷ ತುಂಬಿದ ಕೃಷಿಕರು, ಕೃಷಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಕರ್ನಾಟಕ ವ್ಯವಸಾಯೋತ್ನನ್ನ ಮಾರುಕಟ್ಟೆ ಸಮಿತಿಗಳಿಗೆ ಸಂಕ್ಷಿಪ್ತವಾಗಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ಧಪಡಿಸಲು ಆಯಾಯ ತಾಲೂಕು ತಹಶೀಲ್ದಾರರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿರುತ್ತದೆ.

ಸಂಬಂಧಪಟ್ಟ ಅಧಿಕಾರಿಗಳು ಕೃಷಿಕ ಮತದಾರರ ಪಟ್ಟಿಗಳನ್ನು ಪಹಣಿ ಪತ್ರಿಕೆಯ ಆಧಾರದಲ್ಲಿ ತಯಾರಿಸಲು ಜನವರಿ 17 ಕೊನೆಯ ದಿನವಾಗಿದ್ದು, ಕೃಷಿಕ ಮತದಾರರ ಪಟ್ಟಿಯ ಕರಡು ಪ್ರಕಟಣೆಯನ್ನು ಜನವರಿ 18 ರಂದು ಪ್ರಕಟಿಸಿ, ಜನವರಿ 18 ರಿಂದ ಫೆಬ್ರವರಿ 2 ರ ವರೆಗೆ ಮತದಾರರ ಕರಡು ಪಟ್ಟಿಗಳಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿ, ಫೆಬ್ರವರಿ 3 ರಿಂದ 6 ರ ವರೆಗೆ ಮತದಾರರ ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿ, ತಿದ್ದುಪಡಿ ಮಾಡಿ, ಫೆ. 7 ರಂದು ಕೃಷಿಕ ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಹೊರಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!