Home ಸುದ್ಧಿಗಳು ಪ್ರಾದೇಶಿಕ ಉಡುಪಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಏ. 3 ರಿಂದ ಕ್ರಾಶ್ ಕೋರ್ಸ್ ತರಬೇತಿ

ಉಡುಪಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಏ. 3 ರಿಂದ ಕ್ರಾಶ್ ಕೋರ್ಸ್ ತರಬೇತಿ

504
0

ಉಡುಪಿ, ಮಾ.29: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿಯು ಏಪ್ರಿಲ್ 3 ರಿಂದ ಈ ಕೆಳಕಂಡ ಕಾಲೇಜುಗಳಲ್ಲಿ ನಡೆಯಲಿದೆ.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್, ಬೈಂದೂರು, ನಾವುಂದ, ಉಪ್ಪುಂದ ಹಾಗೂ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ ನಾಯಕ್, ಕೋಟೇಶ್ವರ ಹಾಗೂ ತೆಕ್ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋಟೇಶ್ವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಪ್ರಾಂಶುಪಾಲೆ ಸುಶೀಲಾ, ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ, ಹೆಬ್ರಿ, ಹಿರಿಯಡ್ಕ ಮತ್ತು ಬೈಲೂರು ಸರಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್, ಮುನಿಯಾಲು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಬೇಬಿ ಶೆಟ್ಟಿ, ಬೆಳ್ಮಣ್ಣು ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಕಿಶೋರಿ ಬಿ, ಬಜಗೋಳಿ, ಸಾಣೂರು ಹಾಗೂ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಅಖಿಲಾ ಜಿ ಹೆಬ್ಬಾರ್, ಹಾಲಾಡಿ ಹಾಗೂ ಬಿದ್ಕಲ್‌ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಿದ್ಕಲ್‌ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ವಿಘ್ನೇಶ್ವರ ಭಟ್, ಶಂಕರನಾರಾಯಣ ಹಾಗೂ ಹೊಸಂಗಡಿ ಸರಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೊಸಂಗಡಿ ಸ.ಪ.ಪೂ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಗೋಪಾಲ ಭಟ್ ಮತ್ತು ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯ ಅವರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.