Monday, January 20, 2025
Monday, January 20, 2025

ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ. 1: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಎಂಸಿಎಂಸಿ ಕಚೇರಿಗೆ ಭೇಟಿ ನೀಡಿ ಮಾತನಾಡುತ್ತಾ, ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎಂಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದು ಅವರು ಹೇಳಿದರು. ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ ವಿಳಾಸ, ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದರು.

ಮುದ್ರಣ ಕುರಿತ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ 3 ದಿನಗಳ ಒಳಗಾಗಿ ಹಾಗೂ ಸಾಮಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆಯು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದೆ ಎಂದರು. ಜಿಲ್ಲಾ ಎಂಸಿಎಂಸಿ ಕಚೇರಿಯನ್ನು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ತೆರೆಯಲಾಗಿದ್ದು, ಜಾಹೀರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲಾ ಎಂಸಿಎಂಸಿ ಸಮಿತಿಯ ನೋಡೆಲ್ ಅಧಿಕಾರಿ ಮತ್ತು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮೇಲ್ವಿಚಾರಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!