Sunday, January 19, 2025
Sunday, January 19, 2025

ಗೃಹ ಸಚಿವರಿಂದ ಪೊಲೀಸ್ ವಸತಿಗೃಹ ಉದ್ಘಾಟನೆ

ಗೃಹ ಸಚಿವರಿಂದ ಪೊಲೀಸ್ ವಸತಿಗೃಹ ಉದ್ಘಾಟನೆ

Date:

ಉಡುಪಿ: ಉಡುಪಿ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಹ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು.

ರಾಜ್ಯದಲ್ಲಿ ಗೃಹ ಇಲಾಖೆವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ರೈಮ್ ಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ.

ಆಧುನಿಕ ತಂತ್ರಜ್ಞಾನಗಳನ್ನು ಇಲಾಖೆಯಲ್ಲಿ ಅಳವಡಿಸಿದ್ದು, ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಆಗಿದ್ದು, ಹಣ ಕಳೆದುಕೊಂಡ ವ್ಯಕ್ತಿ 1-2 ಗಂಟೆಯೊಳಗೆ ದೂರು ನೀಡಬೇಕು. ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು ಅಗತ್ಯವಿದ್ದಲ್ಲಿ 112 ಗೆ ಕರೆ ಮಾಡುವಂತೆ ಸಚಿವರು ಹೇಳಿದರು.

ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವಾಗ ಅಗ್ನಿಶಾಮಕ ಇಲಾಖೆಯ ನಿರಪೇಕ್ಷಣಾ ಅನುಮತಿ ಪತ್ರ ಮತ್ತು ಕಟ್ಟಡ ಮುಕ್ತಾಯಗೊಂಡಾಗ ಕ್ಲಿಯರೆನ್ಸ್ ಪತ್ರ ಪಡೆಯುವುದು ಕಡ್ಡಾಯ ಎಂದ ಸಚಿವರು, ಮಾದಕ ವಸ್ತುಗಳ ನಿಯಂತ್ರಣ ಇಲಾಖೆಗೆ ದೊಡ್ಡ ಸವಾಲಾಗಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿಗಳನ್ನು ಇಲಾಖೆಗೆ ನೀಡಬೇಕು. ರಾಜ್ಯದಲ್ಲಿ ಎಫ್.ಎಸ್.ಎಲ್ ಲ್ಯಾಬ್ ನ್ನು ಅತ್ಯಾಧುನಿಕವಾಗಿ ಸಿದ್ದಪಡಿಸಿದ್ದು, ಸೈಬರ್ ಕ್ರೈಮ್ ತನಿಖೆ ಕುರಿತಂತೆ ಗುಜರಾತ್ ಸರ್ಕಾರದೊಂದಿಗೆ ಎಂಓಯು ಮಾಡಿಕೊಂಡಿದ್ದು, ರಾಜ್ಯದ ಸಿಬ್ಬಂದಿಗಳನ್ನು ಅಲ್ಲಿಗೆ ತರಬೇತಿಗಾಗಿ ಕಳುಹಿಸಲಾಗುವುದು ಎಂದರು.

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದ್ದು, ಮಧ್ಯವರ್ತಿಗಳನ್ನು ನಂಬಿ ಯಾರೂ ಮೋಸ ಹೋಗಬೇಡಿ. ಇಂತಹ ಮಧ್ಯವರ್ತಿಗಳ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಹೇಳಿದರು. ಉಡುಪಿಯ ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆಗೆ ಮಂಜೂರಾತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಉಡುಪಿ ನಗರದಲ್ಲಿ ಪೊಲೀಸರಿಗೆ ಮನೆ ಕೊರತೆ ಇದೆ. ದೊಡ್ಡಣಗುಡ್ಡೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಸತಿಗೃಹಗಳನ್ನು ನೆಲಸಮ ಮಾಡಿ, ಸಮುಚ್ಛಯ ಮಾದರಿಯಲ್ಲಿ ನೂತನ ಗೃಹಗಳ ನಿರ್ಮಾಣ, ಶ್ರೀ ಕೃಷ್ಣಮಠದಲ್ಲಿ ಪೊಲೀಸ್ ಔಟ್‌ಪೋಸ್ಟ್ ನಿರ್ಮಾಣ ಮತ್ತು ಮಣಿಪಾಲದಲ್ಲಿ ಅಗ್ನಿಶಾಮಕ ಠಾಣೆಗೆ ಮಂಜೂರು ನೀಡುವಂತೆ ಕೋರಿದರು. ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಎ.ಎನ್.ಎಫ್ ಹಾಗೂ ಕರಾವಳಿ ಕಾವಲು ಪಡೆ ಎಸ್ಪಿ ನಿಖಿಲ್ ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ವಂದಿಸಿದರು. ಮನಮೋಹನ್ ರಾವ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!