Wednesday, January 22, 2025
Wednesday, January 22, 2025

ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ. 5: ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಿದಲ್ಲಿ ಅಂತಹ ಮುದ್ರಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಬುಧವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು, ಪ್ಲೆಕ್ಸ್ ಮುದ್ರಕರು ಮತ್ತು ಅವರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರಪತ್ರ, ಫಲಕ, ಪೋಸ್ಟರ್, ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಧರ್ಮ, ಜಾತಿ, ಭಾಷೆ, ಜನರ ಭಾವನೆಗೆ ಧಕ್ಕೆಯಾಗುವಂತಹ ವಿಷಯಗಳನ್ನು ಮುದ್ರಿಸಬಾರದು ಎಂದು ತಿಳಿಸಿದರು. ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ದೃಢೀಕರಣ ಪಡೆದಿರಲೇಬೇಕು.

ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಒಂದು ಪ್ರತಿಯನ್ನು, ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿAಗ್ ಪ್ರೆಸ್ ಮಾಲೀಕರು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು. ಮುದ್ರಣ ಕುರಿತ ಸೂಕ್ತ ಬಿಲ್ ಗಳನ್ನು ಇಟ್ಟುಕೊಂಡಿರಬೇಕು, ಮುದ್ರಣ ವೆಚ್ಚವನ್ನು ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಖರ್ಚು ವೆಚ್ಚಗಳಿಗೆ ಸೇರ್ಪಡೆ ಮಾಡುವುದರಿಂದ, ಅಗತ್ಯವಿದ್ದಲ್ಲಿ ಅವುಗಳನ್ನು ಹಾಜರುಪಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತರಬೇತಿ ನಿರತ ಪ್ರೊಬೇಷನರಿ ಐ.ಎ.ಎಸ್.ಅಧಿಕಾರಿ ಯತೀಶ್ ಉಪಸ್ಥಿತರಿದ್ದರು. ಮಾಸ್ಟರ್ ಟ್ರೈನರ್ ಡಾ. ಅಶೋಕ್ ಕಾಮತ್ ಅವರು ಮುದ್ರಣ ಮತ್ತು ಪ್ರಿಂಟಿಂಗ್ ಚುನಾವಣಾ ಆಯೋಗವು ಸೂಚಿಸಿರುವ ಮಾನದಂಡಗಳ ಕುರಿತಂತೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಪ್ರಿಂಟಿಂಗ್ ಪ್ರೆಸ್ ಗಳ ಮಾಲೀಕರು, ಪ್ಲೆಕ್ಸ್ ಮುದ್ರಕರು ಮತ್ತು ಅವರ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ

ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ...

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...
error: Content is protected !!