Wednesday, January 22, 2025
Wednesday, January 22, 2025

ಕೆ.ಎಂ.ಸಿ ಮಣಿಪಾಲ: ವಿಶ್ವ ಆರೋಗ್ಯ ದಿನಾಚರಣೆ

ಕೆ.ಎಂ.ಸಿ ಮಣಿಪಾಲ: ವಿಶ್ವ ಆರೋಗ್ಯ ದಿನಾಚರಣೆ

Date:

ಮಣಿಪಾಲ, ಏ. 6: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದು ಆಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು ಆದರೆ ಈಗ ಅಸಾಂಕ್ರಾಮಿಕ ಮತ್ತು ಜೀವನಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು ತಿಳಿಸಿದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಗುರುವಾರ ಸಮುದಾಯ ಆರೋಗ್ಯ ವಿಭಾಗದ ತಂಡದವರು ರಚಿಸಿರುವ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣಗೊಳಿಸಿ ಅವರು ಮಾತನಾಡಿದರು. ಈ ವರ್ಷದ ಘೋಷವಾಕ್ಯ “ಎಲ್ಲರಿಗೂ ಆರೋಗ್ಯ” ಎಂಬುದಾಗಿದೆ. ಇದನ್ನು ಕೇಂದ್ರೀಕರಿಸುವುದರ ಜೊತೆಗೆ, ವಿಶ್ವ ಅರೋಗ್ಯ ಸಂಸ್ಥೆಯು ತನ್ನ 75ನೇ ವಾರ್ಷಿಕೋತ್ಸವವನ್ನು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ 75 ವರ್ಷಗಳ ವಿಷಯದ ಅಡಿಯಲ್ಲಿ ಆಚರಿಸುತ್ತಿದೆ. ಇದರ ಅಂಗವಾಗಿ ಗುರುವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಬೆಳಗ್ಗಿನಿಂದ ಆರೋಗ್ಯ ಜಾಗೃತಿ ಮೂಡಿಸುವ ಭಾಗವಾಗಿ ವಿವಿಧ ತಂಡಗಳಿಂದ ಬೀದಿ ನಾಟಕವನ್ನು ಏರ್ಪಡಿಸಲಾಗಿತ್ತು. ಅಲ್ಲದೇ ಆಸ್ಪತ್ರೆಯ ಉದ್ಯೋಗಿಗಳಿಗೆ ಆರೋಗ್ಯದ ಕುರಿತು ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಶಿರನ್ ಶೆಟ್ಟಿ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್, ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ. ಶುಭ ಸೂರಿಯ ಮತ್ತು ಆಡಳಿತ ವೃಂದದವರು ಉಪಸ್ಥಿತರಿದ್ದರು. ಸುಮಾರು 1000 ಕ್ಕೂ ಹೆಚ್ಚು ಜನರು ಉಚಿತ ಅರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!