Wednesday, February 26, 2025
Wednesday, February 26, 2025

ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ

ಉಡುಪಿ: ವಿಶ್ವ ಆರೋಗ್ಯ ದಿನಾಚರಣೆ

Date:

ಉಡುಪಿ, ಏ. 6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಸ್ಪತ್ರೆ ಎನ್.ಸಿ.ಡಿ ವಿಭಾಗ, ಜಿಲ್ಲಾ ಸರ್ವೇಕ್ಷಣಾ ವಿಭಾಗ ಎನ್.ಸಿ.ಡಿ ಘಟಕ, ಸಮುದಾಯ ವೈದ್ಯಕೀಯ ವಿಭಾಗ, ದಂತ ಚಿಕಿತ್ಸಾ ವಿಭಾಗ ಕೆ.ಎಂ.ಸಿ ಮಣಿಪಾಲ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಮೆಸ್ಕಾಂ ಉಡುಪಿ ಇವರ ಸಹಯೋಗದಲ್ಲಿ ಎಲ್ಲರಿಗೂ ಆರೋಗ್ಯ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಸ್ಕಾಂ ಪವರ್ ಮ್ಯಾನ್ ನೌಕರರು ಹಾಗೂ ಕಚೇರಿ ಸಿಬ್ಬಂದಿಗಳಿಗೆ ಆರೋಗ್ಯ ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಗುರುವಾರ ಉಡುಪಿಯ ಮೆಸ್ಕಾಂ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಘೋಷಣಾ ಫಲಕ ಬಿಡುಗಡೆ ಮಾಡಿ, ವಿಶ್ವ ಆರೋಗ್ಯ ದಿನಾಚರಣೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೇಷಲಿಟಿ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯೆ ಡಾ ಆಕರ್ಷಿತ, ಸಮುದಾಯ ವೈದ್ಯಕೀಯ ವಿಭಾಗದ ಡಾ. ಜಗ್ನೇಶಿನಿ ಮೈಥಿ, ಸಮುದಾಯ ದಂತ ಚಿಕಿತ್ಸಾ ವಿಭಾಗದ ಹೆಚ್.ಓ.ಡಿ ಡಾ.ರಾಮಚಂದ್ರ ಪ್ರಸಾದ್, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯಾಯ, ಉಪ ನಿಯಂತ್ರಣಾಧಿಕಾರಿ ರಮೇಶ್, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ, ಉಡುಪಿ ಕೆ.ಪಿ.ಟಿ.ಸಿ.ಎಲ್ ಯೂನಿಯನ್ ಪದಾಧಿಕಾರಿಗಳು, ಮೆಸ್ಕಾಂ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿ, ಎನ್.ಸಿ.ಡಿ ಕೌನ್ಸಿಲರ್ ಮನು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!