Monday, January 20, 2025
Monday, January 20, 2025

ವಿದೇಶದಲ್ಲಿ ಮತ್ತು ಹೊರ ರಾಜ್ಯದಲ್ಲಿನ ಜಿಲ್ಲೆಯ ಮತದಾರರನ್ನು ಸೆಳಯಲು ಜಿಲ್ಲಾ ಸ್ವೀಪ್ ವತಿಯಿಂದ ವಿನೂತನ ಪ್ರಯತ್ನ

ವಿದೇಶದಲ್ಲಿ ಮತ್ತು ಹೊರ ರಾಜ್ಯದಲ್ಲಿನ ಜಿಲ್ಲೆಯ ಮತದಾರರನ್ನು ಸೆಳಯಲು ಜಿಲ್ಲಾ ಸ್ವೀಪ್ ವತಿಯಿಂದ ವಿನೂತನ ಪ್ರಯತ್ನ

Date:

ಉಡುಪಿ, ಏ. 9: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ.

ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರ ರಾಜ್ಯಗಳಿಗೆ ತೆರಳಿದ್ದು, ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿದ್ದಾರೆ. ಇಲ್ಲಿನ ತಮ್ಮ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಬ್ಬ ಮುಂತಾದ ವಿಶೇಷ ದಿನಗಳಂದು ಊರಿಗೆ ಆಗಮಿಸುತ್ತಾರೆ. ಮತದಾನದ ದಿನದಂದು ಇವರು ಊರಿಗೆ ಆಗಮಿಸಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡಿ, ಆ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಚಿಂತನೆ ನಡೆಸಿದೆ.

ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಎಷ್ಟೇ ದೂರದಲ್ಲಿದ್ದರೂ ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗಲಿದ್ದು, ಇದನ್ನು ಬಳಸಿಕೊಂಡು ಹೊರದೇಶ ಮತ್ತು ಹೊರ ರಾಜ್ಯದಲ್ಲಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳೊಂದಿಗೆ ಝೂಮ್ ಅಥವಾ ಯುಟ್ಯೂಬ್ ಮೂಲಕ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆ ನಡೆಸಲಿದ್ದು, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಚಿಂತನೆ ನಡೆದಿದೆ.

ವಿದೇಶದಲ್ಲಿರುವ ಜಿಲ್ಲೆಯ ನಾಗರಿಕರನ್ನು ಮತದಾನಕ್ಕೆ ಕರೆತರಲು ಇಲ್ಲಿ ನಲೆಸಿರುವ ಅವರ ಪೋಷಕರು ಮತ್ತು ಅಪ್ತರ ಮೂಲಕ ಮತದಾನ ದಿನವಾದ ಮೇ 10 ರಂದು ಮನೆಗಳಿಗೆ ಆಗಮಿಸುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದ್ದು, ಈ ಬಗ್ಗೆ ಪೋಷಕರಿಂದ ತಮ್ಮ ಮಕ್ಕಳಿಗೆ ಪತ್ರ ಬರೆಯುವಂತೆ ಪ್ರೇರೇಪಿಸಲಾಗುತ್ತಿದೆ. ಈ ಪತ್ರದಲ್ಲಿ ಚುನಾವಣೆಗಾಗಿ ನೀವು ಓದಿದ ಶಾಲೆಯ ಕಟ್ಟಡಗಳು ಸಾಂಪ್ರದಾಯಿಕ ಚಿತ್ರಗಳ ವಿನ್ಯಾಸದೊಂದಿಗೆ ಆಕರ್ಷಕವಾಗಿ ಶೃಂಗಾರಗೊಂಡಿರುವ ಬಗ್ಗೆ, ಮತದಾನ ದಿನದಂದು ಮತದಾನಕ್ಕೆ ಆಗಮಿಸಲು ಬರುವ ನಿಮ್ಮ ನಿರೀಕ್ಷೆಯನ್ನು ಕಾತುರದಿಂದ ಕಾಣುತ್ತಿರುವ ನಿಮ್ಮ ಇಲ್ಲಿನ ಸ್ನೇಹಿತರನ್ನೂ, ಬಂಧುಗಳ ಆಶಯವನ್ನೂ ತಿಳಿಸುವ ಉದ್ದೇಶ ಹೊಂದಲಾಗಿದೆ.

“ಜಿಲ್ಲೆಯ ಸಾವಿರಾರು ಮಂದಿ ವಿದೇಶ ಮತ್ತು ಹೊರ ರಾಜ್ಯದಲ್ಲಿ ನಲೆಸಿದ್ದು, ಜಿಲ್ಲೆಯೊಂದಿಗೆ ಎಲ್ಲಾ ರೀತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದಿದ್ದು, ಜಿಲ್ಲೆಯ ಪ್ರಗತಿಯ ಬಗ್ಗೆ ವಿಶೇಷ ಕಾಳಜಿಯನ್ನೂ ಹೊಂದಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವದ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ಈ ಎಲ್ಲಾ ನಾಗರಿಕರು ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಬೇಕು. ಇದಕ್ಕಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿನೂತನ ಪ್ರಯತ್ನಗಳನ್ನು ಮಾಡಲಾಗುತ್ತಿದೆ”- ಪ್ರಸನ್ನ ಹೆಚ್, ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಡುಪಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!