Tuesday, November 26, 2024
Tuesday, November 26, 2024

ಉಡುಪಿ ಡಾ. ಟಿಎಂಎ ಪೈ ಆಸ್ಪತ್ರೆ: ಆರೋಗ್ಯ ತಪಾಸಣೆ ಪ್ಯಾಕೇಜ್

ಉಡುಪಿ ಡಾ. ಟಿಎಂಎ ಪೈ ಆಸ್ಪತ್ರೆ: ಆರೋಗ್ಯ ತಪಾಸಣೆ ಪ್ಯಾಕೇಜ್

Date:

ಉಡುಪಿ, ಏ. 9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಆಶ್ರಯದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸಂಸ್ಥೆಯಾದ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ವಿಶ್ವ ಆರೋಗ್ಯ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಸಾರ್ವಜನಿಕರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್ ಗಳನ್ನು ನೀಡುತ್ತಿದೆ.

“ಹೆಲ್ತ್ ಡೇ ಪ್ಯಾಕೇಜ್” ನಲ್ಲಿ ಸಮಗ್ರ ದೈಹಿಕ ಪರೀಕ್ಷೆ, ರಕ್ತ ಪರೀಕ್ಷೆಗಳು, ಮೂತ್ರ ಪರೀಕ್ಷೆಗಳು, ಇಸಿಜಿ, ಎದೆಯ ಎಕ್ಸ್-ರೇ, ಹೊಟ್ಟೆಯ ಅಲ್ಟ್ರಾಸೌಂಡ್ ಮತ್ತು ಜನರಲ್ ಮೆಡಿಸಿನ್‌ನ ತಜ್ಞರೊಂದಿಗೆ ಸಮಾಲೋಚನೆಯನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ “ಹೆಲ್ತ್ ಡೇ ಕಾರ್ಡಿಯಾಕ್ ಪ್ಯಾಕೇಜ್” ನಲ್ಲಿ ಹೃದಯಶಾಸ್ತ್ರಜ್ಞರೊಂದಿಗೆ ಸಮಾಲೋಚನೆಯೊಂದಿಗೆ ಎಕೋಕಾರ್ಡಿಯೋಗ್ರಫಿ ಅಥವಾ ಟಿಎಂಟಿ ಸಹಾ ಇರುತ್ತದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಪ್ಯಾಕೇಜ್‌ಗಳಲ್ಲಿ ಗಮನಾರ್ಹ ರಿಯಾಯಿತಿಯನ್ನು ಒದಗಿಸಲಾಗಿದೆ ಮತ್ತು ಏಪ್ರಿಲ್ 11 ರಿಂದ ಏಪ್ರಿಲ್ 21, 2023 ರವರೆಗೆ ಆಸ್ಪತ್ರೆ ಆವರಣದಲ್ಲಿ ಪಡೆಯಬಹುದು. ಎಲ್ಲಾ ವಾರದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಲಭ್ಯವಿರುತ್ತದೆ. ಮುಂಚಿತವಾಗಿ ಅಪಾಯಿಂಟ್ಮೆಂಟ್ ಗೆ ಆದ್ಯತೆ ಇರುವುದರಿಂದ 7259361555 ಗೆ ಕರೆ ಮಾಡುವ ಮೂಲಕ ಅಥವಾ ಆಸ್ಪತ್ರೆಗೆ ಭೇಟಿ ನೀಡುವ ಮೂಲಕ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬಹುದು.

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯು ತನ್ನ ಸೇವೆಗಳ ನಿರಂತರ ಸುಧಾರಣೆ ಮತ್ತು ಗುಣಮಟ್ಟ ನಿರ್ವಹಣಾ ವ್ಯವಸ್ಥೆಯ ಮೂಲಕ ರೋಗಿಗಳ ಅಗತ್ಯಗಳನ್ನು ಪೂರೈಸಲು ಮತ್ತು ರೋಗಿಗಳ ತೃಪ್ತಿಯನ್ನು ಹೆಚ್ಚಿಸಲು ಬದ್ಧವಾಗಿದೆ. ಆಸ್ಪತ್ರೆಯು ವೆಂಟಿಲೇಟರ್‌ಗಳೊಂದಿಗೆ ಸುಸಜ್ಜಿತವಾದ ಐಸಿಯುಗಳಂತಹ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಹೊಂದಿದೆ, ನಾಲ್ಕು ಸಂಪೂರ್ಣ ಸುಸಜ್ಜಿತ ಆಪರೇಷನ್ ಥಿಯೇಟರ್‌ಗಳು, ಎಕ್ಸ್-ರೇ ಸೇವೆಗಳು, ಅಲ್ಟ್ರಾಸೌಂಡ್, ಪ್ರಯೋಗಾಲಯ, ಫಾರ್ಮಸಿ ಮತ್ತು ಇತರ ಸೇವೆಗಳನ್ನು ಹೊಂದಿದೆ. ಅಲ್ಲದೇ, 5 ಕಿ ಮೀ ವ್ಯಾಪ್ತಿಯಲ್ಲಿ ಮನೆಯಿಂದ ರಕ್ತ ಮಾದರಿ ಸಂಗ್ರಹಿಸುವ ಸೌಲಭ್ಯವಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಆರಾಮದಾಯಕ ಮತ್ತು ನೈರ್ಮಲ್ಯದ ವಾತಾವರಣದಲ್ಲಿ ಪರಿಣಿತ ವೈದ್ಯರಿಂದ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಲು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ಸಂಪರ್ಕಿಸಿ- ದೂರವಾಣಿ ಸಂಖ್ಯೆ 7259361555, [email protected].

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!