ಬ್ರಹ್ಮಾವರ, ಏ. 10: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಇದರ ಮಹಿಳಾ ಸಂಘದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯರಿಗೆ ‘ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆ’ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೋಸೆಫ್ ಅತಿಥಿ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಉಡುಪ ವಹಿಸಿದ್ದರು.
ಮಹಿಳಾ ಸಂಘದ ಪ್ರಾಧ್ಯಾಪಕ ಸಲಹೆಗಾರರಾದ ವನಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕ ಸಲಹೆಗಾರರಾದ ಜ್ಯೋತಿ ಹಾಗೂ ಮಹಿಳಾ ಸಂಘದ ನಾಯಕಿ ವಂದಿತಾ ಉಪಸ್ಥಿತರಿದ್ದರು.