Friday, September 20, 2024
Friday, September 20, 2024

ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ. 10: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್‌ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು,ನೀರಿನ ಸಮರ್ಪಕ ಪೂರೈಕೆಗೆ, ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಬಗ್ಗೆ ಕ್ರಮವಹಿಸಲು ತಿಳಿಸಿದರು. ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಮತ್ತು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಬೈಂದೂರು ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಬಿ.ಟಿ.ಮೋಹನ್, ತಹಸೀಲ್ದಾರ್ ಶೋಭಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!