ಉಡುಪಿ, ಏ.14: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿ.ಸುನೀಲ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕಾಪು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರುವುದಿಲ್ಲ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.
ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ
Date: