ಕಾರ್ಕಳ, ಏ. 14: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ ಹೆಗ್ಗಳಿಕೆಯೂ ಇವರದ್ದು ಎಂಬುದನ್ನು ಸ್ಮರಿಸುತ್ತಾ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್ ಗೌಡ , ಆಡಳಿತಾಧಿಕಾರಿ ಜಯಪ್ರಕಾಶ್ ಶೆಟ್ಟಿ, ಉಪನ್ಯಾಸಕರಾದ ಸುಮಂತ ದಾಮ್ಲೆ, ಶಶಿರಾಜ್, ಅಕ್ಷತಾ, ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.