ಬೆಳ್ಮಣ್, ಏ. 14: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‌ರವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಮಾತನಾಡುತ್ತಾ, ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಲೇಬೇಕೆಂದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ದಿನೇಶ್ ಬೀರೊಟ್ಟು, ರಾಜೇಶ್ ಕೊಟ್ಯಾನ್, ಸತೀಶ್ ಅಬ್ಬನಡ್ಕ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಮಂಡಳಿ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಕುಮಾರ್, ಸದಸ್ಯರಾದ ಬಾಲಕೃಷ್ಣ ಮಡಿವಾಳ, ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಹರಿಣಾಕ್ಷಿ ಪೂಜಾರಿ, ಅಶ್ವಿನಿ ಪೂಜಾರಿ ಮೊದಲಾದವರಿದ್ದರು.