Sunday, January 19, 2025
Sunday, January 19, 2025

ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ.15: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಚಾರಪಡಿಸುವ ಪೂರ್ವಾನುಮತಿ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿವ ಆಭ್ಯರ್ಥಿಗಳು, ಚುನಾವಣಾ ಜಾಹೀರಾತುಗಳನ್ನು ಪ್ರಚಾರ ಮಾಡುವ ಮುನ್ನ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವ ಪ್ರಾಮಾಣೀಕರಣ ಪಡೆದು ಪ್ರದರ್ಶಿಸಬೇಕು ಎಂದರು.

ಜಾಹೀರಾತಿನಲ್ಲಿ ಇತರರಿಗೆ ದೂರುವುದು, ಅಸ್ಪಷ್ಟ ಅಥವಾ ಮಾನಹಾನಿಕರ, ಹಿಂಸೆ ಪ್ರಚೋದನೆ, ನ್ಯಾಯಾಲಯ ನಿಂದನೆ, ರಾಷ್ಟ್ರದ ಏಕತೆ ಸಾರ್ವಭೌಮತ್ವಕ್ಕೆ ವಿರುದ್ದ ಹೇಳಿಕೆ ಸೇರಿದಂತೆ ಧಾರ್ಮಿಕ ಕ್ಷೇತ್ರಗಳ ಚಿತ್ರಣ, ದೇಶದ ಸೇನಾಪಡೆಯ ಹಾಗೂ ಸೇನಾ ವ್ಯಕ್ತಿಗಳ ಚಿತ್ರ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಒಳಗೊಂಡಿರಬಾರದು ಎಂದರು.

ಕಾರ್ಯಗಾರದಲ್ಲಿ ತರಬೇತಿ ನೀಡಿದ ಮಾಸ್ಟರ್ ಟ್ರೈನರ್ ಡಾ. ಅಶೋಕ್ ಕಾಮತ್ ಮಾತನಾಡಿ, ಅರ್ಜಿ ಸಲ್ಲಿಸುವವರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯ ಜೊತೆಯಲ್ಲಿ ಜಾಹೀರಾತು ಒಳಗೊಂಡ ಸಿ.ಡಿ.ಯ ಎರಡು ಪ್ರತಿ, ಅದರಲ್ಲಿನ ಧ್ವನಿ ಮುದ್ರಣದ ದೃಢೀಕರಣ ಪ್ರಮಾಣಪತ್ರ, ಜಾಹೀರಾತು ವಿಷಯದ ಶೀರ್ಷಿಕೆಗಳನ್ನು ಒಳಗೊಂಡಿರಬೇಕು. ಅರ್ಜಿ ಸಲ್ಲಿಸುವವರು ಅಭ್ಯರ್ಥಿಯಾದಲ್ಲಿ ಅದನ್ನು ಪ್ರಚಾರಪಡಿಸುವ 3 ದಿನಗಳ ಮೊದಲೇ ಸಲ್ಲಿಸಿ ಪೂರ್ವಾನುಮತಿ ಪಡೆಯಬೇಕು ಎಂದ ಅವರು ಅದರ ತಯಾರಿಕೆಗೆ ತಗಲುವ ವೆಚ್ಚ, ಮಾಧ್ಯಮಗಳಲ್ಲಿ ಪ್ರಚಾರಪಡಿಸಲು ತಗಲುವ ವೆಚ್ಚವನ್ನು ಚೆಕ್ ಮೂಲಕ ಪಾವತಿಸಿದ ವಿವರಗಳನ್ನು ನಮೂದಿಸಬೇಕು. ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಚಾರಪಡಿಸುವುದು ಸೇರಿದಂತೆ ಚಿತ್ರಣ ತಯಾರಿಕೆಯ ವೆಚ್ಚಗಳನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಭರಿಸಲಾಗುವುದು. ಅಭ್ಯರ್ಥಿಯ ಪರವಾಗಿ ಯಾವುದೇ 3 ನೇ ವ್ಯಕ್ತಿಗಳು ಜಾಹೀರಾತು ಪೂರ್ವ ಪ್ರಾಮಾಣೀಕರಣ ಅನುಮತಿ ಕೋರಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಮಾನ್ಯತೆ ಮಾಡುವುದಿಲ್ಲ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಅಭಿಷೇಕ್ ರಂಜನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!