ಉಡುಪಿ, ಏ. 17: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ, ಭಾರತೀಯ ಜನತಾ ಪಾರ್ಟಿಯ ಕಿರಣ್ ಕುಮಾರ್ ಕೊಡ್ಗಿ ಅವರು 3 ನಾಮಪತ್ರ ಸಲ್ಲಿಸಿದ್ದಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಸಾದ ರಾಜ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅಚಾರ್ಯ ನಾಮಪತ್ರ ಸಲ್ಲಿಸಿದ್ದಾರೆ.
121 ಕಾಪು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಗುರ್ಮೆ ಸುರೇಶ್ ಶೆಟ್ಟಿ 2 ನಾಮಪತ್ರಗಳನ್ನು ಹಾಗೂ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಮೊಹಮದ್ ಹನೀಫ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ವಿದ್ಯಾಲಕ್ಷ್ಮೀ 2 ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ 3, ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ 6, ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 4, ಕಾಪು ವಿಧಾನಸಭಾ ಕ್ಷೇತ್ರಕ್ಕೆ 3, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 4 ಸೇರಿದಂತೆ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.