Friday, September 20, 2024
Friday, September 20, 2024

ಜಗತ್ತು ವಿಶೇಷ ಪ್ರತಿಭೆಗಳನ್ನು ಗುರುತಿಸುತ್ತದೆ: ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್

ಜಗತ್ತು ವಿಶೇಷ ಪ್ರತಿಭೆಗಳನ್ನು ಗುರುತಿಸುತ್ತದೆ: ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್

Date:

ಕಾರ್ಕಳ, ಏ. 18: ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲು ತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ, ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಾಧನೆಯ ಕಡೆಗೆ ತುಡಿತ, ಅವಕಾಶವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಬೇಕೆಂದು ಕರೆ ನೀಡಿದರು.

ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸಾಹಿತ್ಯ ಭಾವನಾತ್ಮಕ ವಿಷಯ, ಸಾಹಿತ್ಯದ ಜೊತೆ ಜೊತೆಗೆ ಭಾವನೆಗಳೊಂದಿಗೆ ಬದುಕಬೇಕಾಗಿದೆ ಎಂದರು. ‘ಓಲಿಂಪಿಯಾಡ್’ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಪದಕ ನೀಡಿ ಗೌರವಿಸಲಾಯಿತು. ಬೋಧಕ ಬೋಧಕೇತರರು, ಪಿ.ಆರ್.ಓ ಲಿಶನ್ ಗೌಡ, ಆಡಳಿತಾಧಿಕಾರಿ ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಶಿವಕುಮಾರ್ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!