Friday, September 20, 2024
Friday, September 20, 2024

ಬ್ರಹ್ಮಾವರ ರುಡ್‌ಸೆಟ್‌: ಮೊಬೈಲ್ ರಿಪೇರಿ ತರಬೇತಿಯ ಸಮಾರೋಪ

ಬ್ರಹ್ಮಾವರ ರುಡ್‌ಸೆಟ್‌: ಮೊಬೈಲ್ ರಿಪೇರಿ ತರಬೇತಿಯ ಸಮಾರೋಪ

Date:

ಬ್ರಹ್ಮಾವರ, ಏ. 18: ರುಡ್ಸೆಟ್ ಸಂಸ್ಥೆಯಲ್ಲಿ ಪಡೆದ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಂಸ್ಕಾರ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಿ ಎಂದು ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯ ಹಳೆ ವಿದ್ಯಾರ್ಥಿ ಬ್ರಹ್ಮಾವರ ಅವಿರಾಗ್ ಸ್ಟುಡಿಯೋ ಮಾಲಕ ರಾಜೇಶ ದೇವಾಡಿಗ ಹೇಳಿದರು. ಅವರು ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮೊಬೈಲ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಲಕ್ಷೀಶ್ ಎ. ಜಿ ವಹಿಸಿ ಮಾತನಾಡುತ್ತಾ, ಸ್ವಉದ್ಯೋಗ ಪ್ರಾರಂಭಿಸುವಾಗ ಬ್ಯಾಂಕಿನ ಸೌಲಭ್ಯಗಳನ್ನು ಬಳಸಿಕೊಳ್ಳಿ, ಸಂಸ್ಥೆ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌರವ ಉಪನ್ಯಾಸಕರಾದ ಗುರುರಾಜ್ ಅನುಭವ ಹಂಚಿಕೊಂಡರು. ಸಂಸ್ಥೆಯ ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!