ಉಡುಪಿ, ಏ.18: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಇಂದು ಜಿಲ್ಲೆಯಲ್ಲಿ 9 ಜನ ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಗೋಪಾಲ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ದಿನೇಶ್, ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉದಯ ಶೆಟ್ಟಿ, ಜಾತ್ಯಾತೀತ ಜನತಾದಳದ ಅಭ್ಯರ್ಥಿಯಾಗಿ ಶ್ರೀಕಾಂತ್ ಪೂಜಾರಿ , ಪಕ್ಷೇತರ ಅಭ್ಯರ್ಥಿಗಳಾಗಿ ಪ್ರಮೋದ್ ಮುತಾಲಿಕ್, ಡಾ. ಮಮತಾ ಹೆಗ್ಡೆ, ಕೆ. ಹರೀಶ್ ಅಧಿಕಾರಿ, ಸುಧಾಕರ ಆಚಾರ್ಯ ನಾಮಪತ್ರಗಳನ್ನು ಸಲ್ಲಿಸಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇಂದು 9 ಮಂದಿ ನಾಮಪತ್ರ ಸಲ್ಲಿಕೆ
ಉಡುಪಿ ಜಿಲ್ಲೆಯಲ್ಲಿ ಇಂದು 9 ಮಂದಿ ನಾಮಪತ್ರ ಸಲ್ಲಿಕೆ
Date: