Tuesday, February 25, 2025
Tuesday, February 25, 2025

ಕಾರ್ಯಕರ್ತರಲ್ಲಿ ಬದ್ದತೆಯಿದ್ದಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯ: ಅಶೋಕ್ ಕುಮಾರ್ ಕೊಡವೂರು

ಕಾರ್ಯಕರ್ತರಲ್ಲಿ ಬದ್ದತೆಯಿದ್ದಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯ: ಅಶೋಕ್ ಕುಮಾರ್ ಕೊಡವೂರು

Date:

ಉಡುಪಿ: ಗತವರ್ಷದಲ್ಲಿ ಜಿಲ್ಲೆಯ ಹಲವು ಮುಖಂಡರು ಇಹಲೋಕ ತ್ಯಜಿಸಿದ್ದಾರೆ. ಅವರಷ್ಟೇ ಬದ್ದತೆ ಉಳ್ಳ ವ್ಯಕ್ತಿಗಳನ್ನು ಗುರುತಿಸುವುದು ಪಕ್ಷದ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ತೊಡಗಿಕೊಳ್ಳುವುದರಿಂದ ಪಕ್ಷ ಬೆಳೆಯುತ್ತಿದೆ. ಈ ಹಿನ್ನಲೆಯಿಂದ ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳು ಜಯಗಳಿಸಲು ಸಾಧ್ಯವಾಯಿತು.

ಕಾಪು ಪುರಸಭಾ ಚುನಾವಣೆಯಲ್ಲಿ ಮತ ವಿಭಜನೆಯಿಂದ ಪಕ್ಷಕ್ಕೆ ಹಿನ್ನಡೆಯಾದರೂ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಆಗುತ್ತಿರುವ ಹಾನಿಯನ್ನು ತಡೆಗಟ್ಟುವ ಬಗ್ಗೆ ಕಾರ್ಯಯೋಜನೆ ಹಮ್ಮಿಕೊಳ್ಳಬೇಕಾಗಿದೆ. ಪಕ್ಷದ ಮೇಲೆ ಪ್ರತಿಯೊಬ್ಬರಿಗೂ ಬದ್ಧತೆ ಇರಬೇಕು. ಆಗ ಮಾತ್ರ ಪಕ್ಷ ಬೆಳವಣಿಗೆ ಹೊಂದಲು ಸಾಧ್ಯ ಎಂದರು.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡುತ್ತಾ, ರಾಜ್ಯದ ಹಿತಾಸಕ್ತಿಗಾಗಿ ಕಾಂಗ್ರೆಸ್‌ನಿಂದ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ಇದೇ ತಾರೀಕು 9 ರಿಂದ 19ರ ವರೆಗೆ ನಡೆಯುವ ಈ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಬೇಕಾಗಿದೆ.

ಕುಡಿಯುವ ನೀರಿನ ಹಕ್ಕಿಗೋಸ್ಕರ ನಡೆಯುವ ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕಾಗಿದೆ ಎಂದರು. ಕೋಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರ ಮನೆಯ ಪಕ್ಕವೇ ಕೊರಗ ಜನಾಂಗದ ಮೇಲೆ ಪೋಲಿಸ್ ದೌರ್ಜನ್ಯ ನಡೆದಿದೆ. ಸರಕಾರದ ವೈಫಲ್ಯವನ್ನು ಮರೆಮಾಚಲು ವಿವಿಧ ಕಟ್ಟುಕತೆಗಳನ್ನು ಕಟ್ಟಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದರು.

ಕೋಟದ ದುರ್ಘಟನೆ ಬಗ್ಗೆ ಜಿಲ್ಲಾ ಕಾಂಗ್ರೆಸ್‌ನಿಂದ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಅಕಾಲಿಕ ನಿಧನ ಹೊಂದಿದ ಪಕ್ಷದ ಮುಖಂಡರಾದ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ, ಜನಾರ್ದನ ಭಂಡಾರ್ಕಾರ್, ಶಂಭು ಪೂಜಾರಿಯವರಿಗೆ ಜಿಲ್ಲಾ
ಕಾಂಗ್ರೆಸ್‌ನಿಂದ ನುಡಿನಮನ ಸಲ್ಲಿಸಲಾಯಿತು.

ಜಿಲ್ಲಾ ವಕ್ತಾರ ಬಿಪಿನ್‌ಚಂದ್ರ ಪಾಲ್ ನಕ್ರೆ ಸ್ವಾಗತಿಸಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಧನ್ಯವಾದವಿತ್ತರು. ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ನವೀನ್‌ಚಂದ್ರ ಸುವರ್ಣ, ಶಂಕರ್ ಕುಂದರ್, ಪ್ರದೀಪ್ ಕುಮಾರ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮದನ್ ಕುಮಾರ್, ದಿನಕರ ಹೇರೂರು, ರಮೇಶ್ ಕಾಂಚನ್, ಮುಂಚೂಣಿ ಘಟಕಗಳ ಅಧ್ಯಕ್ಷರುಗಳಾದ ಕಿಶೋರ್ ಎರ್ಮಾಳ್, ಸೌರಭ್ ಬಲ್ಲಾಳ್, ಶಶಿಧರ ಶೆಟ್ಟಿ ಎಲ್ಲೂರು, ರೋಶನಿ ಒಲಿವರ್, ಇಸ್ಮಾಯಿಲ್ ಆತ್ರಾಡಿ, ರೋಶನ್ ಶೆಟ್ಟಿ, ಗಣೇಶ್ ಪೂಜಾರಿ ಕೆರ್ವಾಶೆ, ಕೆ.ಪಿ.ಸಿ.ಸಿ. ಸಂಯೋಜಕರುಗಳಾದ ವೆರೋನಿಕಾ ಕರ್ನೇಲಿಯೋ, ಹರೀಶ್ ಕಿಣಿ ಅಲೆವೂರು, ಹಬೀಬ್ ಆಲಿ ಖಾದರ್, ಅಬ್ದುಲ್ ಅಜೀಜ್, ಮುರಳಿ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಬಿ. ಹಿರಿಯಣ್ಣ, ನೀರೆ ಕೃಷ್ಣ ಶೆಟ್ಟಿ, ಸುಧಾಕರ ಕೋಟ್ಯಾನ್, ರಮೇಶ್ ಶೆಟ್ಟಿ ಹಾವಂಜೆ, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ದೇವಾನಂದ ಶೆಟ್ಟಿ, ವಿನಯ ಬಲ್ಲಾಳ್, ಬಿ. ಕುಶಲ್ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಹೆಚ್. ನಿತ್ಯಾನಂದ ಶೆಟ್ಟಿ, ಯತೀಶ್ ಕರ್ಕೇರ, ರಾಘವ ದೇವಾಡಿಗ, ಪ್ರಶಾಂತ್ ಜತ್ತನ್ನ, ಬಾಲಕೃಷ್ಣ ಪೂಜಾರಿ, ಎಸ್. ವಿಜಯ ಶಂಕರ್, ಭಾಸ್ಕರ್ ಪೂಜಾರಿ ಹಿರಿಯಡ್ಕ, ಲೂಯಿಸ್ ಲೋಬೊ, ಜಯ ಶೆಟ್ಟಿ ಬನ್ನಂಜೆ, ಸೋಮನಾಥ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!