Monday, January 20, 2025
Monday, January 20, 2025

ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ. 23: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂಧಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಭಾನುವಾರ ಉಡುಪಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತರಬೇತಿ ಸಮಯದಲ್ಲಿ ಇ.ವಿ.ಎಂ ಗಳ ಬಳಕೆ, ವಿವಿ ಪ್ಯಾಟ್ ಬಳಕೆ ಸೇರಿದಂತೆ ಮತದಾನ ದಿನದಂದು ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಡೆಯುವ ಎಲ್ಲಾ ಪ್ರಕ್ರಿಯೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಬಗ್ಗೆ ಸವಿವರವಾಗಿ ತಿಳಿದುಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ತರಬೇತುದಾರರಿಂದ ಅದನ್ನು ಬಗೆಹರಿಸಿಕೊಂಡು, ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಚುನಾವಣಾ ಪ್ರಕ್ರಿಯೆಯ ಯಶಸ್ಸಿಗೆ ಮತಗಟ್ಟೆ ಮಟ್ಟದಲ್ಲಿ ನಡೆಯುವ ಕಾರ್ಯವು ಅತ್ಯಂತ ಪ್ರಮುಖವಾಗಿರುವುದರಿಂದ ,ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಪರಸ್ಪರ ಸಮನ್ವಯದಿಂದ ತಮ್ಮ ಕರ್ತವ್ಯ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!