Home ಸುದ್ಧಿಗಳು ಪ್ರಾದೇಶಿಕ ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ

ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ

353
0

ಉಡುಪಿ, ಏ.24: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಜಿಲ್ಲೆಯಲ್ಲಿ ನಾಮಪತ್ರಗಳನ್ನು ಹಿಂಪಡೆದವರ ವಿವರ ಇಂತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿರುವುದಿಲ್ಲ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಜಯರಾಜ್, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ದೀನ ಪ್ರಭಾಕರ ಸಾಲ್ಯಾನ್, ಕೆ.ಕೃಷ್ಣಮೂರ್ತಿ ಆಚಾರ್ಯ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಅಬ್ದುಲ್ ರಝಾಕ್ ಶಾಬನ್ ಅಹ್ಮದ್ ಮತ್ತು ಅಬ್ದುಲ್ ರಹಿಮಾನ್, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣ ಶೆಟ್ಟಿ ಮತ್ತು ಕೆ. ಹರೀಶ್ ಪೂಜಾರಿ ನಾಮಪತ್ರಗಳನ್ನು ಹಿಂಪಡೆದಿರುತ್ತಾರೆ. ಅಂತಿಮವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 9, ಕುಂದಾಪುರದಲ್ಲಿ 5, ಉಡುಪಿಯಲ್ಲಿ 7, ಕಾಪು ನಲ್ಲಿ 5 ಹಾಗೂ ಕಾರ್ಕಳದಲ್ಲಿ 9 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.