Home ಸುದ್ಧಿಗಳು ಪ್ರಾದೇಶಿಕ ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ

ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ

262
0

ಉಡುಪಿ, ಏ.24: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳ ನಿಯೋಜನೆ ಕುರಿತಂತೆ ಚುನಾವಣಾ ಆಯೋಗದ ತಂತ್ರಾಂಶದ ಮೂಲಕ ಕರ್ತವ್ಯ ನಿಯೋಜನೆಯ 2 ಹಂತದ ಕಾರ್ಯವು ಎಲ್ಲಾ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಮ್ಮುಖದಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯದಲ್ಲಿ ಚುನಾವಣಾ ಕರ್ತವ್ಯದ ತರಬೇತಿ ನಿಯೋಜಿಸಲಾದ ಮತ್ತು ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಧಿಕಾರಿ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್‌ಸರ್ವರ್ ಗಳ ವಿವರಗಳನ್ನು ಮತ್ತು ಕರ್ತವ್ಯಕ್ಕೆ ನಿಯೋಜಿಸಲಾದ ಸ್ಥಳಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಯಿತು.

ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ವೀಕ್ಷಕ ತುಕಾರಾಂ ಹರಿಬಾವು ಮುಂಡೆ, ಕಾರ್ಕಳ ಕ್ಷೇತ್ರದ ವೀಕ್ಷಕರಾದ ಆಂದ್ರ ವಂಶಿ, ಬೈಂದೂರು ಕ್ಷೇತ್ರದ ವೀಕ್ಷಕ ಅಣ್ಣವಿ ದಿನೇಶ್ ಕುಮಾರ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಎನ್.ಐ.ಸಿ.ಮುಖ್ಯಸ್ಥ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.