ಮಲ್ಪೆ, ಏ. 25: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕ ಹಾಗೂ ಐಸಿಐಸಿಐ ಬ್ಯಾಂಕ್‌ನ ಸಂಯುಕ್ತ ಆಶ್ರಯದಲ್ಲಿ ಕ್ಯಾಂಪಸ್ ಡ್ರೈವ್ ಕಾರ್ಯಕ್ರಮ ನಡೆಯಿತು. ಐಸಿಐಸಿಐ ಬ್ಯಾಂಕ್‌ನ ಹೆಚ್.ಆರ್. ಶಿವಕುಮಾರ್ ಅವರು ಬ್ಯಾಂಕ್‌ನಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಮಾಡಿ ಅದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಗುರುತಿಸಿ, ಬ್ಯಾಂಕ್‌ನ ಉದ್ಯೋಗಕ್ಕೆ ಸಂಬಂಧಿಸಿದಂತೆ ಅಂತಿಮ ಪಟ್ಟಿಯನ್ನು ತಯಾರಿಸಿದರು. ಸುಮಾರು 200 ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡು ಅದರ ಸದುಪಯೋಗ ಪಡೆದುಕೊಂಡರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ ಕೆ. ಅವರು ಬ್ಯಾಂಕ್‌ಗಳಲ್ಲಿ ವಿಫುಲವಾದ ಉದ್ಯೋಗಾವಕಾಶಗಳಿವೆ. ಅವುಗಳನ್ನು ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ತಿಮ್ಮಣ್ಣ ಜಿ. ಭಟ್, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಾಣಿಜ್ಯಶಾಸ್ತ್ರ ವಿಭಾಗದ ಬಿಂದು ಟಿ., ಡಾ. ಉದಯ ಶೆಟ್ಟಿ ಕೆ. ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿ
ಘಟಕದ ಸಂಚಾಲಕರಾದ ಡಾ. ಎಚ್.ಕೆ. ವೆಂಕಟೇಶ ಸ್ವಾಗತಿಸಿ, ಉಮೇಶ್ ಪೈ ವಂದಿಸಿದರು.