Friday, September 20, 2024
Friday, September 20, 2024

ಭಗೀರಥ ಮಹರ್ಷಿ ದೃಢ ಸಂಕಲ್ಪದ ಪ್ರತೀಕ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

ಭಗೀರಥ ಮಹರ್ಷಿ ದೃಢ ಸಂಕಲ್ಪದ ಪ್ರತೀಕ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

Date:

ಉಡುಪಿ, ಏ.27: ದಾರ್ಶನಿಕರ ಸಾಧನೆಯು ಅವರು ನಡೆದು ಬಂದ ಕಷ್ಟದ ಹಾದಿಯನ್ನು ತಿಳಿಸುತ್ತದೆ. ಭಗೀರಥ ಮಹರ್ಷಿಯ ತ್ಯಾಗ, ಪ್ರಯತ್ನ, ಛಲ, ದೃಢ ಸಂಕಲ್ಪದಿಂದ ಪವಿತ್ರಗಂಗೆಯು ಭೂಮಿಗೆ ಬರುವಂತಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಗಂಗೆಯ ಜಲದರ್ಪಣದಿಂದ ಪೂರ್ವಜರಿಗೆ ಮೋಕ್ಷ ಸಿಗುವಂತೆ ಮಾಡಿದ ತಪಸ್ವಿ ಭಗೀರಥ ಮಹರ್ಷಿಗಳು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಭಗೀರಥ ಪ್ರಯತ್ನ ಅತ್ಯಗತ್ಯ ಎಂದರು. ಕನ್ನಡ ಸಾಹಿತ್ಯ ಪರಿಷತ್‌ನ ನರಸಿಂಹಮೂರ್ತಿ, ಭವನ ಪ್ರಸಾದ್ ಹೆಗ್ಡೆ, ಸಂಗೊಳ್ಳಿ ರಾಯಣ್ಣ ಬಳಗದ ಜಿಲ್ಲಾಧ್ಯಕ್ಷ ಸಿದ್ಧಬಸವಯ್ಯ ಸ್ವಾಮಿ ಹಿರೇಮಠ, ಸಾಹಿತಿ ನಾರಾಯಣ ಮಡಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!