Monday, January 20, 2025
Monday, January 20, 2025

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆಪ್

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆಪ್

Date:

ಉಡುಪಿ, ಏ. 27: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್‌ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ?: ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದ ದೂರವಿರಬೇಕು. ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.

ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು. ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!