Monday, January 20, 2025
Monday, January 20, 2025

ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?

ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?

Date:

ಉಡುಪಿ, ಏ. 27 (ಕವಾ): ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ.

ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ಕಡಿಮೆ ಮಾಡಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರನ್ನು ಸೇವಿಸಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ/ ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು. ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್‌ ತಂಪು ಪಾನೀಯಗಳನ್ನು ಸೇವಿಸಬಾರದು. ಈ ಸಂದರ್ಭದಲ್ಲಿ ಬಿಸಿ ಆಹಾರವನ್ನು ಸೇವಿಸಬಾರದು. ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕುಪ್ರಾಣಿಗಳನ್ನು ಬಿಡಬಾರದು.

ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯ ಮತ್ತು ಓ.ಆರ್.ಎಸ್‌ ಅನ್ನು ಬಳಸಬೇಕು. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್‌ ಅಥವಾ ಸನ್‌ಶೆಡ್‌ಗಳನ್ನು ಬಳಸಬೇಕು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ/ ಟೋಪಿ ಅಥವಾ ಕ್ಯಾಪ್/ ಹೆಡ್‌ಕವರ್, ಹ್ಯಾಂಡ್‌ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಮೌಖಿಕ ರೀಹೈಡ್ರೇಶನ್ ಪೌಡರ್ ಒಳಗೊಂಡಿರುವ ಬಿಸಿಗಾಳಿ ತಡೆಗಟ್ಟುವ ಕಿಟ್‌ತೆಗೆದುಕೊಂಡು ಹೋಗಲು ನಾಗರಿಕರನ್ನು ಪ್ರೋತ್ಸಾಹಿಸಬೇಕು.

ಬಿಸಿಗಾಳಿಯಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ, ಬಳಲಿಕೆ ಮತ್ತು ಸನ್ ಸ್ಟ್ರೋಕ್ ನಂತಹ ಆರೋಗ್ಯ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ವ್ಯಕ್ತಿಯು ಪ್ರಜ್ಞೆ ಹೊಂದಿದ್ದರೆ, ನೀರು ಅಥವಾ ಪುನರ್ಜಲೀಕರಣ ಪಾನೀಯ ನೀಡಿ, ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡರೆ, ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ನೀಡಬೇಕು. ಮದ್ಯಪಾನ, ಕಾಫಿ ಹಾಗೂ ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಬಿಸಿಗಾಳಿಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಲಿಸಬೇಕು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!