Tuesday, January 21, 2025
Tuesday, January 21, 2025

ಮೀನುಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಕಟಿಬದ್ಧವಾಗಿದೆ: ರಾಹುಲ್ ಗಾಂಧಿ

ಮೀನುಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಕಟಿಬದ್ಧವಾಗಿದೆ: ರಾಹುಲ್ ಗಾಂಧಿ

Date:

ಉಚ್ಚಿಲ, ಏ. 27: ಮೀನುಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಕಟಿಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಮೀನುಗಾರರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಬಡ್ಡಿ ರಹಿತ ಸಾಲ ಮತ್ತು 10 ಲಕ್ಷ ವಿಮೆಯನ್ನು ನೀಡುವುದಾಗಿ ಘೋಷಿಸಿದರು. ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು. ರಾಜ್ಯದಲ್ಲಿರುವ ಬಿಜೆಪಿ ಸರಕಾರವನ್ನು ಜನರು ಆರಿಸಿದ್ದಲ್ಲ. ಶಾಸಕರನ್ನು ಹಣದ ಬಲದಿಂದ ಖರೀದಿಸಿ ರಚಿಸಿದ ಸರಕಾರ ಎಂದು ರಾಹುಲ್ ಗಾಂಧಿ ಹೇಳಿದರು.

ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್, ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಉಡುಪಿ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರತಾಪಚಂದ್ರ ಶೆಟ್ಟಿ, ಎಂ.ಎ. ಗಫೂರ್, ನವೀನಚಂದ್ರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್, ಗೀತಾ ವಾಗ್ಲೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!