ಕಟಪಾಡಿ, ಏ. 28: ರೋಟರಿ ಕ್ಲಬ್ ಶಂಕರಪುರದ ವತಿಯಿಂದ ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಹರೀಶ್ ಜೋಶಿ ಇವರು ಮಲ್ಲಿಗೆ ಬೆಳೆಗಾರರ ಸಮಸ್ಯೆ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುವುದರೊಂದಿಗೆ, ಯಾವ ರೀತಿಯಲ್ಲಿ ಮಲ್ಲಿಗೆ ಬೆಳೆಯನ್ನು ಹೆಚ್ಚಾಗಿ ಬೆಳೆಸಬಹುದು ಎಂಬ ಬಗ್ಗೆ ಮಾಹಿತಿಯನ್ನು ನೀಡಿದರು.
ರೋಟರಿಯ ಅಧ್ಯಕ್ಷರಾದ ಗ್ಲಾಡಸನ್ ಕುಂದರ್ ಸ್ವಾಗತಿಸಿ, ರೆನ್ ಡಯಾಸ್ ಪರಿಚಯಿಸಿದರು, ವಿಕ್ಟರ್ ಮಾರ್ಟಿಸ್ ಪ್ರಾರ್ಥನೆ ನೆರವೇರಿಸಿದರು. ನಿಯೋಜಿತ ಅಧ್ಯಕ್ಷರಾದ ಜಾರ್ಜ್ ಡಿಸಿಲ್ವ, ರೋಟರಿ ಕಾರ್ಯದರ್ಶಿ ಸಿಲ್ವಿಯಾ ಕಾಸ್ಟಲಿನೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.