Wednesday, November 27, 2024
Wednesday, November 27, 2024

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ ಫಲಿತಾಂಶ: ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಏ. 29: ರಾಷ್ಟ್ರಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ, ಗಣಿತಶಾಸ್ತ್ರದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನಶಾಸ್ತ್ರದಲ್ಲಿ 99.3912 ಪರ್ಸಂಟೈಲ್‌ನೊಂದಿಗೆ ಒಟ್ಟು 99.8421730 ಪರ್ಸಂಟೈಲ್ ಗಳಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಪ್ರಣವ್ ಗುಜ್ಜರ್ 99.84217 ಪರ್ಸಂಟೈಲ್, ಶ್ರೇಯಸ್ ಆರ್ ಗೌಡ 98.89945 ಪರ್ಸಂಟೈಲ್, ಧನ್ವಿತ್ ನಾಯಕ್ 98.8703 ಪರ್ಸಂಟೈಲ್, ಸಮೃದ್ಧ್ ನೆಲ್ಲಿ 98.84006 ಪರ್ಸಂಟೈಲ್, ಅರ್ಹನ್ ಎ.ಕೆ 98.60173 ಪರ್ಸಂಟೈಲ್, ಧ್ರುವ ಪಿ.ಬಿ 98.57012 ಪರ್ಸಂಟೈಲ್, ಅಮೃತ್ ಗೌಡ ಪಾಟೀಲ್ 98.53126 ಪರ್ಸಂಟೈಲ್, ರೋಹಿತ್ ಹೆಗ್ಡೆ 98.34645 ಪರ್ಸಂಟೈಲ್, ಚೇತನ್ ಸಿ ಪಾಟೀಲ್ 98.22345 ಪರ್ಸಂಟೈಲ್ ಪಡೆದಿರುತ್ತಾರೆ.

ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ಒಟ್ಟು 126 ವಿದ್ಯಾರ್ಥಿಗಳು ಐಐಟಿ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿಕೊಂಡಿರುತ್ತಾರೆ. ಈ ಹಿಂದೆ 2020-21 ಮತ್ತು 2021-22ರ ಜೆಇಇ ಮೈನ್ ಅಂತಿಮ ಫಲಿತಾಂಶದಲ್ಲಿಯೂ ಜ್ಞಾನಸುಧಾದ ಐವರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಶ್ಲಾಘಿಸಿ ಎಲ್ಲರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!