Monday, January 20, 2025
Monday, January 20, 2025

ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಜೆ.ಇ.ಇ ಮೈನ್‌ ಪರೀಕ್ಷೆಯಲಿ ಅತ್ಯುತ್ತಮ ಸಾಧನೆ

ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಜೆ.ಇ.ಇ ಮೈನ್‌ ಪರೀಕ್ಷೆಯಲಿ ಅತ್ಯುತ್ತಮ ಸಾಧನೆ

Date:

ಕಾರ್ಕಳ, ಏ. 29: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಏಪ್ರಿಲ್‌ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ ಜೆ.ಇ.ಇ ಮೈನ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್‌ ಎಂ. ಆರ್‌. ಆಲ್‌ ಇಂಡಿಯಾ ರ‍್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ‍್ಯಾಂಕ್‌ ಪಡೆದಿದ್ದಾರೆ. ಜಾಗೃತಿ ಕೆ.ಪಿ. 158 ನೇ ರ‍್ಯಾಂಕ್‌, ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್‌ನೊಂದಿಗೆ ಒಟ್ಟು 98.4035 ಪರ್ಸಂಟೈಲ್‌ ಗಳಿಸಿದ್ದಾರೆ.

ಉದ್ಭವ್‌ ಎಂ. ಆರ್‌. 97.8930 ಪರ್ಸಂಟೈಲ್‌, ಜಾಗೃತಿ ಕೆ.ಪಿ 97.8402 ಪರ್ಸಂಟೈಲ್‌, ಶ್ರೇಯಸ್‌ ಎಸ್‌ ಚಿಕಾಲೆ 97.6936 ಪರ್ಸಂಟೈಲ್‌, ಜಾರ್ಜ್‌ ಜೋಸೆಫ್‌ 97.6545 ಪರ್ಸಂಟೈಲ್‌, ಅಭಯ್‌ ಎಸ್‌ ಎಸ್‌ 97.5012 ಪರ್ಸಂಟೈಲ್‌ ಹಾಗೂ ಸಾತ್ವಿಕ್‌ ಎಸ್‌ ಶೆಟ್ಟಿ 97.3316 ಪರ್ಸಂಟೈಲ್‌ ಪಡೆದು ದೇಶದ ಪ್ರತಿಷ್ಠಿತ ತಾಂತ್ರಿಕ ವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.

ಸಂಸ್ಥೆಯ 23 ವಿದ್ಯಾರ್ಥಿಗಳು 95 ಕ್ಕಿಂತ ಹೆಚ್ಚು ಪರ್ಸಂಟೈಲ್‌, 52 ವಿದ್ಯಾರ್ಥಿಗಳು 90 ಕ್ಕಿಂತ ಹೆಚ್ಚು ಪರ್ಸಂಟೈಲ್‌ ಗಳಿಸಿರುತ್ತಾರೆ. ಒಟ್ಟು 152 ವಿದ್ಯಾರ್ಥಿಗಳು ಜೆ.ಇ.ಇ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರರು ಹಾಗೂ ಜೆಇಇ ಸಂಯೋಜಕರಾದ ನಂದೀಶ್‌ ಹೆಚ್‌. ಬಿ. ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!