Monday, January 20, 2025
Monday, January 20, 2025

ಮೇ 10 ಮತ ಒತ್ತು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಮೇ 10 ಮತ ಒತ್ತು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಏ.30: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10 ಮತ ಒತ್ತು ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ಭಾನುವಾರ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ, ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ ಧ್ಯೇಯ ವಾಕ್ಯದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ತಾವು ಮತದಾನ ಮಾಡಬೇಕಾದ ಮತಗಟ್ಟೆಯ ವಿಳಾಸವನ್ನು ಮೊದಲೇ ತಿಳಿದುಕೊಳ್ಳುವುದರಿಂದ ಮತದಾನ ದಿನದಂದು ಮತಗಟ್ಟೆ ಕುರಿತ ಯಾವುದೇ ಗೊಂದಲಗಳಿಗೆ ಒಳಗಾಗದೇ ಸುಲಭವಾಗಿ ಮತದಾನ ಮಾಡಲು ಸಾಧ್ಯವಿದೆ. ಈ ಮಾಹಿತಿಯನ್ನು ತಮ್ಮ ವ್ಯಾಪ್ತಿಯ ಬಿ.ಎಲ್.ಓ ಗಳ ಬಳಿ, ಚುನಾವಣಾ ಆಯೋಗದ ವೋಟರ್ ಹೆಲ್ಪ್ಲೈನ್ ಆಪ್ ಮೂಲಕ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ವತಿಯಿಂದ ಈಗಾಗಲೇ ಹಲವು ವಿನೂತನ ಕಾರ್ಯಕ್ರಮಗಳ ಮೂಲಕ, ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದು, ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶತಾಯುಷಿ ಮತದಾರರೂ ಸಹ ಉತ್ಸಾಹದಿಂದ ಮತದಾನ ಪ್ರಕ್ರಿಯೆಲ್ಲಿ ಭಾಗವಹಿಸುತ್ತಿದ್ದು, ಎಲ್ಲಾ ಯುವ ಮತದಾರರು ತಮ್ಮ ಮೊದಲ ಬಾರಿಯ ಮತವನ್ನು ತಪ್ಪದೇ ಚಲಾಯಿಸುವುವಂತೆ ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನತೆಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲಾಗಿದೆ. ಯುವ ಜನತೆ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸೂಕ್ತ ರೀತಿಯಲ್ಲಿ ಚಲಾಯಿಸುವಂತೆ ತಿಳಿಸಿದರು.

ಡಯಟ್‌ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿಜಯಾ ಮತ್ತು ಶಾಲೆಯ ಶಿಕ್ಷಕ ವೃಂದ, ಬಿ.ಎಲ್.ಓ ಗಳು ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರು ಉಪಸ್ಥಿತರಿದ್ದರು. ಬನ್ನಂಜೆಯಿಂದ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು. ಡಿಡಿಪಿಐ ಗಣಪತಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಜಿಲ್ಲಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ: ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸದ್ರಿ ಶಾಲೆಯಲ್ಲಿರುವ 2 ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗೆ ಆಗಮಿಸುವ ಮತದಾರರಿಗೆ ಯಾವುದೇ ಅಗತ್ಯ ಮೂಲಸೌಕರ್ಯಗಳ ಕೊರತೆಯಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಬಿ.ಎಲ್.ಓ ಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!