Wednesday, November 27, 2024
Wednesday, November 27, 2024

ಕ್ರಿಯೇಟಿವ್‌ ಕಾಲೇಜು: ಮೂವರು ವಿದ್ಯಾರ್ಥಿಗಳು ಎನ್‌.ಡಿ.ಎಗೆ ಆಯ್ಕೆ

ಕ್ರಿಯೇಟಿವ್‌ ಕಾಲೇಜು: ಮೂವರು ವಿದ್ಯಾರ್ಥಿಗಳು ಎನ್‌.ಡಿ.ಎಗೆ ಆಯ್ಕೆ

Date:

ಕಾರ್ಕಳ, ಮೇ 2: ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್‌ 16, 2023 ರಲ್ಲಿ ನಡೆಸಿದ ರಾಷ್ಟ್ರಮಟ್ಟದ ಎನ್‌.ಡಿ.ಎ/ಎನ್‌.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ 3 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್‌ವಾಸ್ಲದಲ್ಲಿರುವ ಎನ್.ಡಿ.ಎ ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್‌ ಅಥವಾ ಬಿ.ಎಸ್‌.ಸಿ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶದಾದ್ಯಂತ ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 7,964 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ನಡೆಯುವ ಎಸ್‌.ಎಸ್‌.ಬಿ (ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್)‌ ಸುತ್ತಿಗೆ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ರಾಮಕುಮಾರ್‌ ಬಾಬು ಬರ್ಗಿ, ಜಾಗೃತಿ ಕೆ.ಪಿ., ಪ್ರಣವ್‌ ಪಿ ಸಂಜಿ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ನ್ಯಾಶನಲ್‌ ಡಿಫೆನ್ಸ್‌ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು, 900 ಅಂಕಗಳಿಗೆ ನಡೆಯುವ ಪರೀಕ್ಷೆಯಲ್ಲಿ 300 ಅಂಕಗಳಿಗೆ ಗಣಿತದ ಪ್ರಶ್ನೆಗಳೇ ಬರುವುದು ವಿದ್ಯಾರ್ಥಿಗಳಿಗೆ ಇರುವ ದೊಡ್ಡ ಸವಾಲು.

ಕ್ರಿಯೇಟಿವ್‌ ಸಂಸ್ಥೆಯಲ್ಲಿ ಇದಕ್ಕಾಗಿ ನಡೆದ ವಿಶೇಷ ಬೋಧನೆ ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣವಾಗಿದೆ.
ಸಾಧಕ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ ಸಂಯೋಜಕರಾದ ಸುಮಂತ್‌ ದಾಮ್ಲೆ, ರಕ್ಷಿತ್ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!