ಬ್ರಹ್ಮಾವರ, ಮೇ 2: ಕರ್ನಾಟಕದ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷದ ‘ಬೃಹತ್ ಸಾರ್ವಜನಿಕ ಸಭೆ’ ಮಂಗಳವಾರ ಬ್ರಹ್ಮಾವರದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಳೆದ 5 ವರ್ಷಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ಪಾಲ್ ಸುವರ್ಣ ಅವರಿಗೆ ಮತ ನೀಡಿ ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ವಿನಂತಿಸಿದರು.
ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ ರಘುಪತಿ ಭಟ್ ಅವರ ಕಾರ್ಯವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರು ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ದಿವಾಕರ್ ಸನಿಲ್, ಆಮ್ ಆದ್ಮಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರಾದ ಡಾಲ್ಫಿ ವಿಕ್ಟರ್ ಲೂಯಿಸ್, ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಜಯಕರ ಬೆಂಗ್ರೆ, ಉಪ್ಪೂರಿನ ಕಾಂಗ್ರೆಸ್ ಕಾರ್ಯಕರ್ತರಾದ ಶಶಿಕಾಂತ್ ಪೂಜಾರಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ನಾಯಕಿ ಶಾರಾದಾ, ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಕಪಿಲೇಶ್ವರ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಕೆ. ರಘುಪತಿ ಭಟ್ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ಪಾಲ್ ಸುವರ್ಣ ಅವರು ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರು ಹಾಗೂ ಚಲನಚಿತ್ರ ನಟಿ ತಾರಾ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಸಂತಿ ಬೈಕಾಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಶ್ವಿನಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಬಿ.ಎನ್ ಶಂಕರ್ ಪೂಜಾರಿ, ಪಕ್ಷದ ಮುಖಂಡರಾದ ಬಿರ್ತಿ ರಾಜೇಶ್ ಶೆಟ್ಟಿ, ಧನಂಜಯ ಅಮೀನ್, ಮೋಹನ್ ಶೆಟ್ಟಿ, ಹರಿಮಕ್ಕಿ ರತ್ನಾಕರ ಶೆಟ್ಟಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.