Home ಸುದ್ಧಿಗಳು ಪ್ರಾದೇಶಿಕ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

423
0

ಉಡುಪಿ, ಮೇ 4: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ‘ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ನಗರಗಳು’ ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರಬಂಧ ಸಲ್ಲಿಸಲು ಜೂನ್ 1 ಕೊನೆಯ ದಿನ.

ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪ್ರಬಂಧಗಳು 1000 ಪದ ಮೀರುವಂತಿಲ್ಲ. ಪಿ.ಡಿ.ಎಫ್ ಫಾರ್ಮ್ಯಾಟ್‌ನಲ್ಲಿ ಪ್ರಬಂಧಗಳನ್ನು ಕಳುಹಿಸಬೇಕು. ಪ್ರಬಂಧದ ಜೊತೆ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಸರ್ಟಿಫಿಕೇಟ್ ನೀಡಲಾಗುವುದು. ಸ್ಪರ್ಧೆಯ ವಿಜೇತರಿಗೆ ಪ್ರಥಮ 3000 ರೂ, ದ್ವಿತೀಯ 2000 ರೂ ಹಾಗೂ ತೃತೀಯ ಬಹುಮಾನವಾಗಿ 1000 ರೂ. ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://kstacademy.in ಅಥವಾ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಜಿ.ಕೆ.ವಿ.ಕೆ ಆವರಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ದೂ.ಸಂಖ್ಯೆ: 080-29721550 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.