ಉಡುಪಿ, ಮೇ 8: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಅಧಿಕಾರಿ/ಸಿಬ್ಬಂದಿಗಳನ್ನು PRO, APRO, PO ಆಗಿ ನಿಯೋಜಿಸಿ ಆದೇಶಿಸಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ತಮಗೆ ನಿಯೋಜಿಸಿದ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ದಿನಾಂಕ 09-05-2023 ರಂದು ಹಾಜರಾಗಬೇಕಾಗಿದೆ.
ವಿವಿಧ ತಾಲೂಕುಗಳಿಂದ ಚುನಾವಣಾ ಕರ್ತವ್ಯಕ್ಕೆ ಹೊರಡುವ PRO, APRO, PO ಗಳನ್ನು ಸದ್ರಿಯವರ ತಾಲೂಕು ಕೇಂದ್ರಗಳಿಂದ ಸದ್ರಿಯವರನ್ನು ನಿಯೋಜಿಸಲಾದ ಮಸ್ಟರಿಂಗ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ಸುಗಳ ವ್ಯವಸ್ಥೆಯನ್ನು ಈ ಕೆಳಗಿನ ಬೈಂದೂರು, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ತಾಲೂಕು ಕೇಂದ್ರಗಳಲ್ಲಿ ಮಾಡಲಾಗಿದೆ. ಬಸ್ಸುಗಳು ದಿನಾಂಕ: 09-05-2023 ರ ಪೂರ್ವಾಹ್ನ 6.30 ಗಂಟೆಗೆ ಹೊರಡಲಿದ್ದು, ನಂತರ ಬಸ್ಸಿನ ವ್ಯವಸ್ಥೆ ಇರುವುದಿಲ್ಲ. ಹಾಗೂ ಚುನಾವಣೆ ಮುಗಿದು ಮಸ್ಟರಿಂಗ್ ಕೇಂದ್ರದಲ್ಲಿ ಇವಿಎಂ. ಮತಯಂತ್ರಗಳನ್ನು ಹಸ್ತಾಂತರಿಸಿದ ನಂತರ ವಾಪಸ್ಸು ಕೇಂದ್ರಸ್ಥಾನಗಳಿಗೆ ಹೋಗಲು ಬಸ್ಸಿನ ವ್ಯವಸ್ಥೆ ಡಿಮಸ್ಟರಿಂಗ್ ಕೇಂದ್ರದಲ್ಲಿ ಮಾಡಲಾಗಿದೆ. ಇದನ್ನು ಗಮನಿಸಿಕೊಂಡು ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಇದರ ಉಪಯೋಗವನ್ನು ಪಡೆಯಬೇಕಾಗಿ ತಿಳಿಸಿದೆ.