Tuesday, September 8, 2026
Tuesday, September 8, 2026

ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ: ಪದ್ಮನಾಭ ಕಾಂಚನ್

ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ: ಪದ್ಮನಾಭ ಕಾಂಚನ್

Date:

ಕೋಟ: ಬದುಕಿನಲ್ಲಿ ಆರೋಗ್ಯ ಉತ್ತಮವಾಗಿದ್ದರೆ ಎಲ್ಲವೂ ಇದ್ದಂತೆ. ಆರೋಗ್ಯದ ಬಗ್ಗೆ ಜಾಗೃತವಾಗಿದ್ದು ಆಗಾಗ ಆರೋಗ್ಯ ತಪಾಸಣೆ ಮಾಡುತ್ತಾ ಸುಂದರ ಆರೋಗ್ಯವಂತ ಜೀವನ ನಡೆಸಬೇಕು.

ಸಾಯ್ಬ್ರಕಟ್ಟೆ ರೋಟರಿ ಕ್ಲಬ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿಯಾಗಿ ಆಯೋಜಿಸಿದ ಇಂತಹ ಆರೋಗ್ಯ ತಪಾಸಣ ಶಿಬಿರ ಅರ್ಥಪೂರ್ಣವಾಗಿದ್ದು ಸಾರ್ವಜನಿಕರಿಗೆ ಸಹಕರಿಯಾಗಿದೆ ಎಂದು ರೋಟರಿ ವಲಯ 3ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಹೇಳಿದರು.

ಅವರು ರೋಟರಿ ಕ್ಲಬ್ ಸಾಯ್ಬ್ರಕಟ್ಟೆ ಸಾರಥ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ರೋಟರಿ ಸಮುದಾಯದಳ ಸಾಯ್ಬ್ರಕಟ್ಟೆ, ದಂತ ಮೆಡಿಕಲ್ ಕಾಲೇಜು ಮಣಿಪಾಲ, ರೋಟರಿ ಸಮುದಾಯ ದಳ ಶಿರಿಯಾರ, ರೋರ‍್ಯಾಕ್ಟ್ ಕ್ಲಬ್ ಮಾನ್ಯ, ವೈದ್ಯಕೀಯ ಪ್ರತಿನಿಧಿಗಳ ಸಂಘ(ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ನುರಿತ ವೈದ್ಯರಿಂದ ಉಚಿತ ದಂತ ಚಿಕಿತ್ಸೆ ಹಾಗೂ ಚರ್ಮರೋಗ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಸ್ತೂರ್ಬಾ ಆಸ್ಪತ್ರೆಯ ಚರ್ಮ ತಪಾಸಣೆಯ ವೈದ್ಯ ಡಾ. ವಿನಯ್ ಅಂಚನ್ ಮಾತನಾಡಿ, ಕಾಲ ಕಾಲಕ್ಕೆ ಸೂಕ್ತ ವೈದ್ಯಕೀಯ ತಪಾಸಣೆಯಿಂದ ಉತ್ತಮ ಆರೋಗ್ಯದಿಂದ ಇರಬಹುದು. ಕಾಯಿಲೆ ಬರುವ ಮುಂಚೆ ಜಾಗೃತರಾಗಿ ಇರುವುದು ಅವಶ್ಯಕ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಯ್ಬ್ರಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಯು ಪ್ರಸಾದ್ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಮಣಿಪಾಲ ದಂತ ವೈದ್ಯಕೀ ಕಾಲೇಜಿನ ವೈದ್ಯ ಡಾ. ಜೀವನ್ ವೈದ್ಯಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ರೋಟರಿ ವಲಯ ಸೇನಾನಿ ವಿಜಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯ ದಾಸ್, ಸಾಯ್ಬ್ರಕಟ್ಟೆ ರೋಟರಿ ಸಮುದಾಯದಳದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಶಿರಿಯಾರದ ಶರತ್ ಕೆ, ರೋರ‍್ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ದ್ರುವಿನ್ ಉಪಸ್ಥಿತರಿದ್ದರು. ಥಾಮಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!