Saturday, July 25, 2026
Saturday, July 25, 2026

ಜಲ ಸಂರಕ್ಷಣೆ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ: ಜೋಸೆಫ್ ರೆಬೆಲ್ಲೊ

ಜಲ ಸಂರಕ್ಷಣೆ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ: ಜೋಸೆಫ್ ರೆಬೆಲ್ಲೊ

Date:

ಉಡುಪಿ: ವರ್ಷದ ಕೆಲವೇ ತಿಂಗಳುಗಳಲ್ಲಿ ಬೀಳುವ ಮಳೆಯು ಹರಿದು ಸಮುದ್ರ ಸೇರುತ್ತದೆ. ಇಂತಹ ಪ್ರದೇಶಗಳಲ್ಲಿ ನೀರನ್ನು ಶೇಖರಿಸಬಹುದಾಗಿದ್ದು, ಈ ರೀತಿಯಲ್ಲಿ ಶೇಖರಿಸಿದ ನೀರು ಸ್ಥಳೀಯ ಅಗತ್ಯತೆಗಳನ್ನು ಪೂರೈಸಲು ಅನುಕೂಲವಾಗುತ್ತದೆ.

ಈ ದಿಸೆಯಲ್ಲಿ ಮಳೆನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣಕ್ಕೆ ನಾವು ಆದ್ಯತೆ ಕೊಡಬೇಕಾಗಿದೆ ಎಂದು ಸ್ವಚ್ಛ ಭಾರತದ ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೊ ಯುವ ಜನಾಂಗಕ್ಕೆ ಕರೆ
ನೀಡಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ರಾಷ್ಟ್ರ‍ೀಯ ಸೇವಾ ಯೋಜನೆ, ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಶ್ರೀ ಕಾಳಿಕಾಂಬಾ ಭಜನಾ ಸಂಘ ತೆಂಕನಿಡಿಯೂರು (ರಿ), ಗುರು ಯುವಕ ಮಂಡಲ ನೇಜಾರು, ಭಗವತಿ ತೀಯಾ ಮಹಿಳಾ ಮಂಡಲ ನೇಜಾರು ಇವರ ಜಂಟಿ ಆಶ್ರಯದಲ್ಲಿ ನಡೆದ “ಸ್ವಚ್ಛ ಊರು – ಹಸಿರು ಊರು” ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ದೀಪ ಬೆಳಗಿಸಿ ಉದ್ಘಾಟಿಸಿ “ಸ್ವಚ್ಛತೆ ಮತ್ತು ಜಲ ಸಂರಕ್ಷಣೆ ಇತ್ತೀಚಿನ ದಿನಗಳಲ್ಲಿ ಅತಿ ಅಗತ್ಯವಾಗಿದೆ. ಈ ತರಬೇತಿ ಕಾರ್ಯಕ್ರಮದಲ್ಲಿ ಕಲಿತ ವಿಷಯಗಳನ್ನು ಕಾರ್ಯರೂಪಕ್ಕೆ ತನ್ನಿ, ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿದರು.

ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಉಮೇಶ್ ಪೈ ಸ್ವಾಗತಿಸಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಷ್ಮಾ ಟಿ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!