Monday, January 20, 2025
Monday, January 20, 2025

ಉಡುಪಿಯ ವಿವಿಧೆಡೆ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

ಉಡುಪಿಯ ವಿವಿಧೆಡೆ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

Date:

ಉಡುಪಿ, ಮೇ 17: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳ ಉತ್ಪಾದನೆಯನ್ನು ಕಡಿಮೆಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಛ ನಗರ ಯೋಜನೆಯ ಕಾರ್ಯಕ್ರಮದಡಿ ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ ಬಳಕೆ ಕೇಂದ್ರಗಳನ್ನು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ ಅಥವಾ ಮೆಟಿರಿಯಲ್ ರೆಕವರಿ ಫೆಸಿಲಿಟಿ (ಎಂ.ಆರ್.ಎಫ್) ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರಗಳನ್ನು ರೆಡ್ಯೂಸ್, ರೀಯೂಸ್ ಮತ್ತು ರೀಸೈಕಲ್ ಕೇಂದ್ರಗಳಾಗಿ ಬಳಸಿ ನನ್ನ ಜೀವನ – ನನ್ನ ಸ್ವಚ್ಛ ನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉಡುಪಿ ನಗರಸಭೆಯ ವತಿಯಿಂದ ಮೇ 20 ರಿಂದ ಜೂನ್ 5 ರ ವರೆಗೆ ಮಲ್ಪೆ ಬೀಚ್ ಹತ್ತಿರ, ಮಣ್ಣಪಳ್ಳ ಪಾರ್ಕಿನ ಹತ್ತಿರ, ಬೀಡಿನಗುಡ್ಡೆಯ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಹತ್ತಿರ, ಬನ್ನಂಜೆ ಕರಾವಳಿ ಬೈಪಾಸ್ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಹತ್ತಿರ, ಆದಿ ಉಡುಪಿ ಮಾರ್ಕೆಟ್ ಬಳಿ, ಗಾಂಧಿ ಭವನ ಬಳಿ, ರಿಲಾಯನ್ಸ್ ಫ್ರೆಶ್ ಹತ್ತಿರ ಹಾಗೂ ಡಿ-ಮಾರ್ಟ್ ಬಳಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು.

ಸಾರ್ವಜನಿಕರು ಮೇಲ್ಕಂಡ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನ ಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳಂತಹ 6 ಬಗೆಯ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳನ್ನು ಸದರಿ ಕೇಂದ್ರಗಳಿಗೆ ನೀಡಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಪರಿಸರ ರಕ್ಷಿಸುವ ಉದ್ದೇಶವನ್ನು ಮನಗಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!