Home ಸುದ್ಧಿಗಳು ಪ್ರಾದೇಶಿಕ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

396
0

ಉಡುಪಿ, ಮೇ 17: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023 ರ ಜೂನ್ 1 ರಿಂದ 2024 ರ ಮಾರ್ಚ್ 30 ರ ವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ತೋಟಗಾರಿಕೆ ಉಪನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.