ಉಡುಪಿ, ಮೇ 18: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಇಲಾಖೆಯ ವತಿಯಿಂದ ಗುರುತಿಸಲಾದ ಪ್ರತಿಷ್ಠಿತ ಶಾಲೆಯಾದ ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲ್ನಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು, 5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.