Home ಸುದ್ಧಿಗಳು ಪ್ರಾದೇಶಿಕ ಬೈಂದೂರಿನಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

ಬೈಂದೂರಿನಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

310
0

ಉಡುಪಿ, ಮೇ 19: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರು ಬಳಸಬಹುದಾದ ವಸ್ತುಗಳ ಸಂಗ್ರಹ ಮಾಡಲು ಮೇ 20 ರಿಂದ ಜೂನ್ 5 ರ ವರೆಗೆ ಬೈಂದೂರು ಪಟ್ಟಣ ಪಂಚಾಯತ್ ಕಚೇರಿ ಬಳಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು.

ಸಾರ್ವಜನಿಕರು ಮೇಲ್ಕಂಡ ಕೇಂದ್ರದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನ ಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳಂತಹ 6 ಬಗೆಯ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳನ್ನು ಸದರಿ ಕೇಂದ್ರಗಳಿಗೆ ನೀಡಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು. ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.