Home ಸುದ್ಧಿಗಳು ಪ್ರಾದೇಶಿಕ ಕೊಡವೂರು: ಉಚಿತ ಕಣ್ಣಿನ ತಪಾಸಣಾ ಶಿಬಿರ

ಕೊಡವೂರು: ಉಚಿತ ಕಣ್ಣಿನ ತಪಾಸಣಾ ಶಿಬಿರ

159
0

ಕೊಡವೂರು, ಮೇ 23: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊಡವೂರು ಉಪಕೇಂದ್ರದಲ್ಲಿ ಮಂಗಳವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಸದರಿ ಶಿಬಿರದಲ್ಲಿ 173 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 47 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 18 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಜೇಷ್ಮ, ಸಮುದಾಯ ಆರೋಗ್ಯ ಅಧಿಕಾರಿ ಮೈತ್ರಿ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.