Tuesday, November 26, 2024
Tuesday, November 26, 2024

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಉಡುಪಿ, ಮೇ 24: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!